Ad Widget .

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಂದು ಭಾರೀ ಮಳೆ ಸುರಿಯುವ ಸೂಚನೆ ಸಿಕ್ಕಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget .

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮಾತ್ರ ಕಾಣಿಸಿಕೊಳ್ಳುತ್ತಿದೆ. ಆದರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಭರ್ಜರಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget . Ad Widget .

ನವೆಂಬರ್ 12ರಿಂದ 14ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎನ್ನಲಾಗಿದೆ. ಉತ್ತರ ಒಳನಾಡಿನಲ್ಲಿ ಸಹ ಇದೆ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಡಿಸೆಂಬರ್ 15ರ ರಾಜ್ಯದಲ್ಲಿ ಪೂರ್ತಿಯಾಗಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಚಂಡಮಾರುತಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಅಕ್ಟೋಬರ್‌, ನವೆಂಬರ್‌ ತಿಂಗಳಿನಲ್ಲಿ ದಾಖಲೆಯ ಮಳೆ ಸುರಿದಿದೆ.

ನವೆಂಬರ್‌ ಮತ್ತು ಡಿಸೆಂಬರ್‌ ತಿಂಗಳಲ್ಲಿಯೂ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಆದರೆ ಅಕ್ಟೋಬರ್‌ ತಿಂಗಳಿನಷ್ಟು ಮಳೆಯ ಪ್ರಭಾವ ಇರುವುದಿಲ್ಲ ಎನ್ನಲಾಗಿದೆ.

Leave a Comment

Your email address will not be published. Required fields are marked *