Ad Widget .

ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ‌ ಪತ್ನಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಮಹತ್ವದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದೆ. ಈಗಾಗಲೇ ಈ ಯೋಜನೆಯ ಹಣವನ್ನೇ ಬಳಸಿಕೊಂಡು ಮಹಿಳೆಯರು ಗೃಹ ಉಪಯೋಗಿ ವಸ್ತುಗಳು, ತಮ್ಮ ಮಕ್ಕಳಿಗೆ ವಾಹನಗಳನ್ನು ಕೊಡಿಸಿದ ಉದಾಹರಣೆಗಳಿವೆ.

Ad Widget . Ad Widget .

ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಗೃಹಿಣಿಯೊಬ್ಬರು ತನ್ನ ಪತಿಗೆ ಸ್ಕೂಟರ್ ಕೊಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹಾಗಾದರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿ ಮಾಡಿದ್ದಾರೆ. ವೃತ್ತಿಯಲ್ಲಿ ಪೇಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೇಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಇದೀಗ ನೆರವಾದಂತಾಗಿದೆ.

ಇನ್ನು ಪತ್ನಿ ಕೊಡಿಸಿದ ತನ್ನ ಸ್ಕೂಟರ್‌ ಮೇಲೆ ಸಲೀಂ ಆರ್ಥಿಕ ನೆರವು ಗೃಹಲಕ್ಷ್ಮಿ ಎಂಬ ಭಿತ್ತಿಪತ್ರ ಅಂಟಿಸಿದ್ದಾರೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿಸಿದ್ದಾರೆ.

ಸನ್ಮಾನ ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್‌ನೊಂದಿಗೆ ಶಾಸಕರನ್ನು ಭೇಟಿಯಾಗಿ ಸರ್ಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹೇಳಿದ್ದಾರೆ. ತನಗೆ ಕೆಲಸಕ್ಕೆ ತೆರಳಲು ಈ ವಾಹನ ನೆರವಾಗಲಿದೆ. ಸರ್ಕಾರಕ್ಕೆ ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸಿದರು. ಇದೇ ವೇಳೆ ಶಾಸಕರು ಸಲೀಂ ಅವರನ್ನು ಸನ್ಮಾನಿಸಿ ಗೌರವಿಸಿದರು.

Leave a Comment

Your email address will not be published. Required fields are marked *