Ad Widget .

ಕೊಪ್ಪಳ: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ| ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ 97 ಜನರಿಗೆ ಜಾಮೀನು ಮಂಜೂರು ಮಾಡಿದೆ.

Ad Widget . Ad Widget .

ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಾಗಿ ಅರ್ಜಿ ಸಲ್ಲಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಪ್ರಕರಣದ ಎ1 ಆರೋಪಿ ಮಂಜುನಾಥ್ ಹೊರತುಪಡಿಸಿ 97 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಮಂಜುನಾಥ್ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ.

Ad Widget . Ad Widget .

ಈ ಕುರಿತು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ:
ಗಂಗಾವತಿ ನಗರದಲ್ಲಿ ಪವರ್ ಸಿನಿಮಾ ನೋಡಲು ಮಂಜುನಾಥ ಎಂಬಾತ ತನ್ನ ಸ್ನೇಹಿತರ ಜೊತೆ ಹೋಗಿದ್ದರು. ಮರಕುಂಬಿ ನಿವಾಸಿಯಾಗಿದ್ದ ಮಂಜುನಾಥ ಎಂಬಾತನ ಮೇಲೆ ಹಲ್ಲೆಯಾಗಿತ್ತು. ಬಳಿಕ ತಮ್ಮದೇ ಊರಿನ ದಲಿತರು ಹಲ್ಲೆ ಮಾಡಿಸಿದ್ದಾರೆ ಎಂದು ಮಂಜುನಾಥ ಗ್ರಾಮದ ಜನರಿಗೆ ಹೇಳಿದ್ದ. ಬಳಿಕ ಮಂಜುನಾಥನ ಪರವಾಗಿ ಗ್ರಾಮದ ಜನರು ದಲಿತರ ಮೇಲೆ ಹಲ್ಲೆ ಮಾಡಿದ್ದರು. ಅನೇಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿ, ಹಲ್ಲೆ ಮಾಡಲಾಗಿತ್ತು. ಈ ಕುರಿತು ಭೀಮೇಶ್ ಎಂಬುವವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು.

Leave a Comment

Your email address will not be published. Required fields are marked *