ಸಮಗ್ರ ನ್ಯೂಸ್: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.
ಎಂ.ಎಂ ಹಿಲ್ಸ್, ಚಾಮರಾಜನಗರದಲ್ಲಿ ಮಳೆಯಾಗಿದೆ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ನಾಲ್ಕೈದು ದಿನವೂ ಕರ್ನಾಟಕದ ನಾನಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಇದಲ್ಲದೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಕುಸಿತ ಕಂಡು ಚಳಿಯ ಪ್ರಮಾಣ ಬೆಳಗಿನ ವೇಳೆ ಅಧಿಕವಾಗಬಹುದು ಎಂದು ಇಲಾಖೆಯು ವರದಿ ನೀಡಿದೆ.
ನವೆಂಬರ್ 12 ರಿಂದ ನವೆಂಬರ್ 20 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನವೆಂಬರ್ 12 ರಿಂದ 17 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.
ನವೆಂಬರ್ 12 ರಿಂದ ನವೆಂಬರ್ 20 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಇಂದು ಒಣ ಹವೆಯಿರುವ ಸಾಧ್ಯತೆಯಿದೆ. ನವೆಂಬರ್ 13 ರಿಂದ 16 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ.