Ad Widget .

ರಾತ್ರಿ ಪಾರ್ಟಿ ಮುಗಿಸಿ ಕಾರಿನಲ್ಲಿ ಹೊರಟ ವಿಧ್ಯಾರ್ಥಿಗಳು ಸೇರಿದ್ದು ಮಸಣಕ್ಕೆ|ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ 6 ಮಂದಿಯ ದೇಹ

ಸಮಗ್ರ ನ್ಯೂಸ್: ನ.15 ರಂದು ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ.ಮೃತರನ್ನು ಡೆಹ್ರಾಡೂನ್‌ ನಿವಾಸಿಗಳಾದ ಗುನೀತ್ ಸಿಂಗ್, ಕಾಮಾಕ್ಷಿ ಸಿಂಘಾಲ್, ನವ್ಯಾ ಗೋಯಲ್, ರಿಷಭ್ ಜೈನ್ ಮತ್ತು ಅತುಲ್ ಅಗರವಾಲ್ ಮತ್ತು ಹಿಮಾಚಲ ಪ್ರದೇಶದ ಚಂಬಾದಿಂದ ಕುನಾಲ್ ಕುಕ್ರೇಜಾ ಎಂದು ಗುರುತಿಸಲಾಗಿದೆ.

Ad Widget . Ad Widget .

ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಸಿದ್ದೇಶ್ ಅಗರವಾಲ್ ಸ್ಥಿತಿ ಗಂಭೀರವಾಗಿದೆ.ಸಿದ್ದೇಶ್‌ ಆಯೋಜಿಸಿದ್ದ ಪಾರ್ಟಿ ಮುಗಿಸಿ 6 ಮಂದಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರನ್ನು ಅತೀವೇಗದಿಂದ ಚಲಾಯಿಸಿದ ಕಾರಣ ಟ್ರಕ್ ನ ಎಡಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ಕಾರಿ ವೇಗ ಎಷ್ಟಿತ್ತು ಎಂದರೆ ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರ ಮೃತ ದೇಹಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.ಪೊಲೀಸ್ ಮಾಹಿತಿಗಳ ಪ್ರಕಾರಣ ವೇಗವಾಗಿ ಕಾರು ಚಲಾಯಿಸಿ ಅಪಘಾತಕ್ಕೆ ಕಾರಣವಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *