ಹೃದಯಾಘಾತದಿಂದ 12 ವರ್ಷದ ಬಾಲಕಿ ಸಾವು

ಸಮಗ್ರ ನ್ಯೂಸ್: 12 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೆಲಂಗಾಣ ಚೆನ್ನೂರು ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚೆನ್ನೂರಿನ ಪದ್ಮನಗರ ಬಡಾವಣೆಯ ಶ್ರೀನಿವಾಸ್-ರಾಮ ದಂಪತಿ ಪುತ್ರಿ ನಿವೃತ್ತಿ(12) ಎಂದು ಗುರುತಿಸಲಾಗಿದೆ. ‌

Ad Widget ... ..

ಈಕೆ ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಕಾರ್ತಿಕ ಹುಣ್ಣಿಮೆ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಹಬ್ಬದ ಚಟುವಟಿಕೆಯಲ್ಲಿ ನಿರತರಾಗಿದ್ದ ಮಗುವೊಂದು ದಿಢೀರ್ ಕುಸಿದು ಬಿದ್ದು, ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Ad Widget

ಮಗುವನ್ನು ಪರೀಕ್ಷಿಸಿದ ವೈದ್ಯರು ನಿವೃತಿ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಆರಂಭದಲ್ಲಿ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.12ರ ಹರೆಯದ ಬಾಲಕಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾಳೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡರು. ನಿವೃತಿ ಸಾವಿನ ಸುದ್ದಿ ಕೇಳಿ ಶಾಲಾ ಶಿಕ್ಷಕರು ಹಾಗೂ ಸಹ ವಿದ್ಯಾರ್ಥಿಗಳು ಕಣ್ಣೀರಿಟ್ಟು ನಿವೃತ್ತಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Leave a Comment

Your email address will not be published. Required fields are marked *