ಚಿಕ್ಕಮಗಳೂರು: ಗಾಂಜಾ ಮಾರಾಟ|ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Ad Widget ... ..

ಚಿಕ್ಕಮಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಚಿಕ್ಕಮಗಳೂರು ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಬಂಧಿಸಿದ್ದಾರೆ.

Ad Widget

ಬಂಧಿತ ಆರೋಪಿಗಳಿಂದ ಸಿ.ಇ.ಎನ್. ಅಪರಾಧ ಪೊಲೀಸರು 1.26 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಫಿನಾಡಿನಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸರು ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐಸ್.ಐ ರಘುನಾಥ ಎಸ್. ವಿ ಮತ್ತು ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್ ಖಾನ್, ಹರೀಶ ಟಿ. ಕೆ, ಧರ್ಮರಾಜ, ಹರಿಪ್ರಸಾದ, ರಮೇಶ ಎನ್. ಆರ್ ಮತ್ತು ಮಹದೇವಸ್ವಾಮಿ ಇದ್ದರು.

Leave a Comment

Your email address will not be published. Required fields are marked *