Ad Widget .

ಕುಕ್ಕೆ‌ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

ಸಮಗ್ರ ನ್ಯೂಸ್: ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

Ad Widget . Ad Widget .

ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು. ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದರಂತೆ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಭಾರತ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದರು.

Ad Widget . Ad Widget .

Leave a Comment

Your email address will not be published. Required fields are marked *