ಸಮಗ್ರ ನ್ಯೂಸ್:ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ವಾಗ್ವಾದ ನಡೆದು ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆಗೆ ಜಗಳಕ್ಕಿಳಿದಾಗ ಕೋಪಗೊಂಡ ಪೊಲೀಸ್ ಅಧಿಕಾರಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದ ಘಟನೆ ಮಧ್ಯಪ್ರದೇಶದ ಟಿಕಾಮ್‌ಗರ್ ಜಿಲ್ಲೆಯಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ಈ ಘಟನೆ ಬಡಗಾಂವ್ ದಸನ್ ಪೊಲೀಸ್ ಠಾಣೆ ವ್ಯಾಪ್ತಿಯ ದರಗ್ವಾನ್ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರೈತ ಫುರ್ಕಾ ಲೋಧಿ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದ ಅವರ ಕುಟುಂಬಕ್ಕೆ ಈ ಸುದ್ದಿ ತಲುಪಿದ್ದು, ಇದು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಇದನ್ನು ವಿರೋಧಿಸಿ ಗ್ರಾಮಸ್ಥರು ಖಾರ್ಗಾಪುರ- ಬಡಗಾಂವ್ ರಸ್ತೆ ತಡೆ ನಡೆಸಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಬಡಗಾಂವ್ ಪೊಲೀಸ್ ಠಾಣೆಯ ಉಸ್ತುವಾರಿ ಅನು ಮೇಘಾ ಗುಪ್ತಾ ದುಬೆ ಸ್ಥಳಕ್ಕೆ ಆಗಮಿಸಿ ರಸ್ತೆ ತಡೆಯನ್ನು ತೆರವುಗೊಳಿಸಿದ್ದಾರೆ.
ಇದರಿಂದ ಪರಿಸ್ಥಿತಿ ಉಲ್ಬಣಗೊಂಡು ವಾಗ್ವಾದಕ್ಕೆ ಕಾರಣವಾಗಿದೆ. ಆಗ ಮಧ್ಯ ಬಂದು ವಾದ ಮಾಡಿದ ಯುವಕನಿಗೆ ಗುಪ್ತಾ ಕಪಾಳಮೋಕ್ಷ ಮಾಡಿದ್ದಾರೆ.ಇದರಿಂದ ಸಿಟಿಗೆದ್ದ ಯುವಕನೋರ್ವ ಆಕೆಯ ಕೆನ್ನೆಗೆ ಬಾರಿಸಿದ್ದಾನೆ. ಪೊಲೀಸರು ವಿಳಂಬ ಮಾಡಿದ್ದರಿಂದ ಗಾಯಗೊಂಡ ರೈತನಿಗೆ ಸಕಾಲದಲ್ಲಿ ವೈದ್ಯಕೀಯ ಸಹಾಯ ಸಿಗದೆ ಆತ ಸಾವನಪ್ಪಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ನಿರ್ಲಕ್ಷ್ಯವು ಅವರ ಕೋಪವನ್ನು ಮತ್ತಷ್ಟು ಹೆಚ್ಚಿಸಿತ್ತು.