ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ| ಗುಲ್ಬರ್ಗಾ‌ ಮೂಲದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಗುಲ್ಬರ್ಗಾ ಮೂಲದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

Ad Widget ... ..

ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದರು. ನ.16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Ad Widget

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಗುಲ್ಬರ್ಗಾದ ಕಾರ್ತಿಕ್ ಎಂಬಾತ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ನ.17ರಂದು ಆರೋಪಿ ಕಾರ್ತಿಕ್ ನನ್ನು ಗುಲ್ಬರ್ಗಾದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Comment

Your email address will not be published. Required fields are marked *