ಸಮಗ್ರ ನ್ಯೂಸ್:ಮಹಾರಾಷ್ಟ್ರದ ಎಲ್ಲಾ 288 ಮತ್ತು ಜಾರ್ಖಂಡ್‌ನ ಎರಡನೇ ಹಂತದ ಚುನಾವಣೆ ಜೊತೆಗೆ ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯು ನ.20ರಂದು ಬೆಳಗ್ಗೆ 7 ಗಂಟೆಗೆ ಶುರುವಾಗಿದೆ.
ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಮತ್ತು ಜಾರ್ಖಂಡ್‌ನ ಎರಡನೇ ಹಂತದ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ಜೊತೆಗೆ ಉತ್ತರಾಖಂಡ್ (ಒಂದು ಸ್ಥಾನ), ಪಂಜಾಬ್ (ನಾಲ್ಕು ಸ್ಥಾನಗಳು) ಮತ್ತು ಕೇರಳ (ಒಂದು ಸ್ಥಾನ)ಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದರೊಂದಿಗೆ ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯುತ್ತಿದೆ.