Ad Widget .

ಭಿಕ್ಷಾಟನೆಗೆ ಬಂದ ಫಕೀರನಿಂದ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರ

ಸಮಗ್ರ ನ್ಯೂಸ್:ಭಿಕ್ಷಾಟನೆಗೆ ಬಂದ ಫಕೀರನೊಬ್ಬ 75 ವರ್ಷದ ವೃದ್ದೆಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾನೆ.ಈ ಘಟನೆ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

ಗ್ರಾಮಕ್ಕೆ ಭಿಕ್ಷಾಟನೆ ಮಾಡಲು ಬಂದ ಫಕೀರ ಮನೆಯಲ್ಲಿ ಯಾರೂ ಇಲ್ಲದಾಗ ಅಜ್ಜಿ ಒಬ್ಬಂಟಿಯಾಗಿದ್ದ ಮನೆಯೊಳಗೆ ನುಗ್ಗಿ ಅಜ್ಜಿಯ ಮೇಲೆ ರೇಪ್ ಮಾಡಿ ಬಂದಿದ್ದಾನೆ. ಅತ್ಯಾಚಾರ ಮಾಡಿದವನನ್ನು ಇದೇ ಗ್ರಾಮದ ಪಕ್ಕದ ಐನೊಳ್ಳಿ ಗ್ರಾಮದ ಫಕೀರ ತಯ್ಯಬ್ ಎಂದು ಗುರುತಿಸಲಾಗಿದೆ. ಫಕೀರ ವೇಷಧಾರಿ ತಯ್ಯಬ್ ಬಿಕ್ಷಾಟನೆ ಮಾಡುತ್ತಾ ಊರೂರು ಸುತ್ತುತ್ತಿದ್ದನು. ಆದರೆ, ಚಂದ್ರಪಳ್ಳಿ ಗ್ರಾಮದಲ್ಲಿ 75 ವರ್ಷದ ನಿಸ್ಸಾಹಾಯಕ ಅಜ್ಜಿಯ ಮೇಲೆ ಅತ್ಯಾಚಾರಗೈದು ಹೀನ ಕೃತ್ಯವೆಸಗಿದ್ದಾನೆ.

Ad Widget . Ad Widget .

ಇನ್ನು ಅತ್ಯಾಚಾರ ಘಟನೆಯ ಬೆನ್ನಲ್ಲಿಯೇ ತೀವ್ರ ಅಸ್ವಸ್ಥಗೊಂಡಿದ್ದ ಅಜ್ಜಿಯನ್ನು ಸ್ಥಳೀಯರು ಬೀದರ್ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಅಜ್ಜಿಯ ಸ್ಥಿತಿ ಗಂಭೀರವಾಗಿದೆ.ಅತ್ಯಾಚಾರ ಮಾಡಿದ ಆರೋಪಿ ಫಕೀರ ತಯ್ಯಬ್ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇನ್ನು ಈ ಘಟನೆಯ ಬೆನ್ನಲ್ಲಿಯೇ ಪೊಲೀಸರು ಈ ಫಕೀರ ಸಿಕ್ಕಲ್ಲಿ ಸುಳಿವು ನೀಡುವಂತೆ ಸುತ್ತಲಿನ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಜೊತೆಗೆ, ಒಬ್ಬಂಟಿ ಮಹಿಳೆಯರು ಇರದೇ ಯಾರ ಜೊತೆಗಾದರೂ ಇರುವಂತೆಯೂ ಗ್ರಾಮೀಣ ಜನರಿಗೆ ಸಲಹೆ ನೀಡಿದ್ದಾರೆ.

Leave a Comment

Your email address will not be published. Required fields are marked *