Ad Widget .

ಹೆಬ್ರಿ: ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್: ಪೀತಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಹುಟ್ಟೂರಾದ ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ಬುಧವಾರ ನೆರವೇರಿತು.

Ad Widget . Ad Widget .

ಹೆಬ್ರಿ ತಾಲ್ಲೂಕಿನ ಕಬ್ಬಿನಾಲೆಯ ಪೀತಬೈಲ್‌ನಲ್ಲಿ ಸೋಮವಾರ ರಾತ್ರಿ ನಕ್ಸಲರು ಮತ್ತು ನಕ್ಸಲ್‌ ನಿಗ್ರಹ ಪಡೆಯ (ಎಎನ್‌ಎಫ್‌) ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ ಅಲಿಯಾಸ್‌ ಶ್ರೀಕಾಂತ್‌ (46) ಹತ್ಯೆಯಾಗಿದ್ದ.

Ad Widget . Ad Widget .

ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಹಲವು ವರ್ಷಗಳಿಂದ ನಕ್ಸಲ್‌ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ.

ಸೋಮವಾರ ರಾತ್ರಿ ಸುಮಾರು ಆರು ಮಂದಿ ನಕ್ಸಲರ ತಂಡ ಪೀತಬೈಲ್‌ನ ಮನೆಯೊಂದರ ಸಮೀಪ ಬಂದಿತ್ತು. ಈ ವೇಳೆ ಅವರು ಹಾಗೂ ಎಎನ್‌ಎಫ್ ತಂಡ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದರು.

Leave a Comment

Your email address will not be published. Required fields are marked *