ಸಮಗ್ರ ನ್ಯೂಸ್:ವಿಧಾನಸೌಧದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು.ವಿಡಿಯೋ ಕಾನ್ಸರೆನ್ಸ್ ವೇಳೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ವಿದ್ಯಾರ್ಥಿಯೊಬ್ಬ ತೀವ್ರ ಮುಜುಗರ ತಂದೊಡ್ಡಿದ್ದಾನೆ.ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಅನ್ನುವುದರ ಮೂಲಕ ಮಧು ಬಂಗಾರಪ್ಪ ಅವರಿಗೆ ಅವಮಾನ ಮಾಡಿದ್ದ ಘಟನೆ ನ.20ರಂದು ನಡೆದಿದೆ.
ವಿಡಿಯೋ ಕಾನ್ಸರೆನ್ಸ್ ಮೂಲಕ ಸಂವಾದ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿ ಭರತ್ ಎಂಬಾತ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ನೇರವಾಗಿಯೇ ಹೇಳಿದ್ದು, ಎಲ್ಲರೂ ನಕ್ಕಿದ್ದಾರೆ. ಮಾತನ್ನ ಗಂಭೀರವಾಗಿ ತೆಗೆದುಕೊಂಡ ಶಿಕ್ಷಣ ಸಚಿವರು ಕೋಪಗೊಂಡು ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ ರೂಪೇಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಲ್ಲಿ, ಯಾರು ನೋಡಿ ರೆಕಾರ್ಡ್ ಮಾಡಿ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.