Ad Widget .

ಕಡಬ: ವಿದ್ಯಾರ್ಥಿಗಳ ಮೇಲೇರಿ ಹೋದ ಉಪನ್ಯಾಸಕ, ಓರ್ವ ಆಸ್ಪತ್ರೆಗೆ ದಾಖಲು

ಕಡಬ: ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ದಕ್ಷಿಣ ಕನ್ನಡದ ಕಡಬ ರಾಮಕುಂಜದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ.ಈ ಘಟನೆ ನ.20ರಂದು ನಡೆದಿದೆ.

Ad Widget . Ad Widget .

ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬರು ಪ್ರಶ್ನಿಸಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.ಓರ್ವ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾಮಕುಂಜದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿಯ ಹೇಳಿಕೆ ಪ್ರಕಾರ ಎಂಟು ವಿದ್ಯಾರ್ಥಿಗಳಿಗೆ ಹೊಡೆದಿರುವುದಾಗಿ ಆರೋಪಿಸಲಾಗಿದೆ.

Ad Widget . Ad Widget .

ತಡ ರಾತ್ರಿ ಕಡಬ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವ ಸಂದರ್ಭದಲ್ಲಿ ಉಪನ್ಯಾಸಕನೂ ಆಗಮಿಸಿದ್ದು, ಸ್ಥಳದಲ್ಲಿದ್ದ ಯುವಕರ ಗುಂಪು ಆಕ್ಷೇಪ ವ್ಯಕ್ತಪಡಿಸಿತು.ಇದೇ ಸಂದರ್ಭ ಆಸ್ಪತ್ರೆಯೊಳಗೆ ಕೆಲ ಹೊತ್ತು ಭಾರಿ ಮಾತಿನ ಚಕಮಕಿ ನಡೆದಿತ್ತು. ಬಳಿಕ ಆಸ್ಪತ್ರೆ ಸಿಬ್ಬಂದಿಗಳು ಯುವಕರಿಗೆ ಆಸ್ಪತ್ರೆಯಿಂದ ಹೊರ ಹೋಗುವಂತೆ ಸೂಚಿಸಿದ್ದರು. ಕಡಬ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *