ಸಮಗ್ರ ನ್ಯೂಸ್:ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ನ.23ರಂದು ಪ್ರಕಟವಾಗಲಿದೆ.ಇಂದು ಬೆಳಗ್ಗೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳು ಮತ್ತು 2 ಲೋಕಸಭಾ ಸ್ಥಾನಗಳ ಉಪಚುನಾವಣೆ ಫಲಿತಾಂಶವೂ ಇಂದು ಬರಲಿದೆ.
ಇವಿಎಂಗಳ ಎಣಿಕೆ ಬೆಳಗ್ಗೆ 8.30ಕ್ಕೆ ಆರಂಭವಾಗಿದೆ.ಮಹಾರಾಷ್ಟ್ರದಲ್ಲಿ ಒಂದು ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಬೇಕು ಎಂದರೆ 145 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಪಡೆಯಬೇಕಿದೆ. ಅದರಂತೆ ಜಾರ್ಖಂಡ್‌ನಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂದರೆ 41 ಸ್ಥಾನಗಳಲ್ಲಿ ಜಯ ಸಾಧಿಸಬೇಕು.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಒಟ್ಟು 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿತ್ತು. ಅದರಂತೆ ಒಟ್ಟು 4,136 ಅಭ್ಯರ್ಥಿಗಳು ಸ್ಪಧಿಸಿದ್ದು ಗೆಲುವಿಗಾಗಿ ಎದುರು ನೋಡುತ್ತಿದ್ದಾರೆ. ಇದರಲ್ಲಿ 2,086 ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿರುವುದು ವಿಶೇಷವಾಗಿದೆ.ಜಾರ್ಖಂಡ್‌ನಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿಗೆ 2 ಹಂತದಲ್ಲಿ ವೋಟಿಂಗ್ ನಡೆಸಲಾಗಿತ್ತು. ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ 38 ಕ್ಷೇತ್ರಗಳಿಗೆ ವೋಟಿಂಗ್ ನಡೆದಿತ್ತು. ಅಂತಿಮ ಫಲಿತಾಂಶ ಏನೆಂಬುದು ಇಂದು ಹೊರಬೀಳಲಿದೆ.
ವಿಧಾನಸಭಾ ಚುನಾವಣಾ ಫಲಿತಾಂಶಗಳ ಜೊತೆಗೆ, ಕೇರಳದ ನಾಂದೇಡ್ ಮತ್ತು ಕೇರಳದ ವಯನಾಡ್ ಅನ್ನು ಎಲ್ಲಾ ಸ್ಥಳಗಳಲ್ಲಿಯೂ ಸೂಕ್ತ ಪೊಲೀಸ್ ಪಡೆಗಳೊಂದಿಗೆ ನಿಯೋಜಿಸಲಾಗಿದೆ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಣಾವಲು ಮಾಡಲಾಗಿದೆ. ವಯನಾಡ್ ನಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ರಾಹುಲ್ ಗಾಂಧಿ ರಾಜೀನಾಮೆಯಿಂದ ಆ ಸ್ಥಾನ ತೆರವಾಗಿತ್ತು.