ಸಮಗ್ರ ನ್ಯೂಸ್: ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಿನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್ ಅವರಿಗೆ ಈವರೆಗೆ 45,982 ಮತಗಳು ಬಂದಿವೆ. ಹಾಗೂ ನಿಖಿಲ್‌ಗೆ 34,808 ಮತಗಳು ಬಂದಿವೆ.
ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ದಾರೆ. ಭರತ್ ಬೊಮ್ಮಾಯಿಗೆ 48,822 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್‌ಗೆ 49,177 ಮತಗಳು ಬಂದಿವೆ. ಈ ಮೂಲಕ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು 355 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಸಂಡೂರಿನಲ್ಲಿ 9ನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಗೆ 44,463 ಮತಗಳು ಬಂದಿವೆ. ಹಾಗೂ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 43,555 ಮತಗಳು ಬಂದಿವೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ 1,108 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.