Ad Widget .

ಬಿಪಿಎಲ್ ಕಾರ್ಡ್ ರದ್ದಾಗಿದೆಯಾ? ಮರಳಿ ಕಾರ್ಡ್ ಪಡೆಯಲು ಹೀಗೆ ಮಾಡಿ…

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿವೆ ಎನ್ನಲಾಗುತ್ತಿದೆ. ಇದೇ ಈಗ ತೀವ್ರ ವಿವಾದಕ್ಕೂ ಕಾರಣವಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ವಾಪಾಸ್ ಸಿಗಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್‌ ತಪ್ಪಿ ಹೋಗಬಾರದು. ಆಕಸ್ಮಾತ್‌ ತಪ್ಪಿ ಹೋಗಿದ್ದರೆ ವಾಪಸ್‌ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

Ad Widget . Ad Widget . Ad Widget .

ಇನ್ನೂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ವಾಪಸ್‌ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *