Ad Widget .

ಸಂಗಾತಿ ಮೇಲೆ ಅತ್ಯಾಚಾರ ಎಸಗಿ 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ದುರುಳ

ಸಮಗ್ರ ನ್ಯೂಸ್:ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಪಾರ್ಟ್ನರ್ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿರುವ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ನಡೆದಿದ್ದು, ಈ ವಿಚಾರ ನಾಯಿಯ ಮೂಲಕ ಬೆಳಕಿಗೆ ಬಂದಿದೆ.

Ad Widget . Ad Widget .

ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್, ಬಂಧಿತ ಆರೋಪಿಯನ್ನು ನರೇಶ್ ಭೇಂಗ್ರಾ ಎಂದು ಗುರುತಿಸಲಾಗಿದ್ದು, ಸಂತ್ರಸ್ತೆಯನ್ನು ಗಂಗಿ ಕುಮಾರಿ (24) ಎಂದು ತಿಳಿದು ಬಂದಿದೆ. ಇವರು ಜೋರ್ಡಾಗ್ ನಿವಾಸಿಗಳೆಂದು ತಿಳಿದು ಬಂದಿದ್ದು, ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದರು.ಗಂಗಿಯೊಂದಿಗೆ ಸಹಬಾಳ್ವೆ ನಡೆಸುತ್ತಿದ್ದ ಆರೋಪಿ ಬೇರೊಂದು ಮಹಿಳೆಯೊಂದಿಗೆ ಮದುವೆಯನ್ನು ಮಾಡಿಕೊಂಡಿದ್ದ.

Ad Widget . Ad Widget .

ನ.08ರಂದು ಆರೋಪಿ ಗಂಗಿಯನ್ನು ಕರೆದುಕೊಂಡು ತನ್ನ ಸ್ವಗ್ರಾಮಕ್ಕೆ ಹೋಗಿದ್ದು, ಬಳಿಕ ತನ್ನ ಮನೆಗೆ ಕರೆದುಕೊಂಡು ಹೋಗಲು ಹಿಂದೇಟು ಹಾಕಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ ಆತ ಹತ್ತಿರದಲ್ಲಿದ್ದ ಕಾಡೊಂದಕ್ಕೆ ಗಂಗಿಯನ್ನು ಕರೆದುಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ದೇಹವನ್ನು 40-50 ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದು ಪರಾರಿಯಾಗಿದ್ದ.ನ.24ರಂದು ನಾಯಿಯೊಂದು ದೇಹದ ಕೆಲವು ಭಾಗಗಳನ್ನು ಕಚ್ಚಿಕೊಂಡು ಓಡಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಿದ ಅಧಿಕಾರಿಗಳು ಮೃತ ಮಹಿಳೆಯ ದೇಹದ ಕೆಲವು ಭಾಗಗಳನ್ನು ವಶಪಡಿಸಿಕೊಂಡಿದ್ದು, ಆ ಬಳಿಕ ಕಾಡಿನಲ್ಲಿ ಒಂದು ಚೀಲ ಸಿಕ್ಕಿತ್ತು, ಅದರಲ್ಲಿ ಗಂಗಿ ಅವರ ಆಧಾರ್ ಕಾರ್ಡ್ ಮತ್ತು ಫೋಟೋ ಸೇರಿದಂತೆ ಆಕೆಗೆ ಸಂಬಂಧಿಸಿದ ವಸ್ತುಗಳಿದ್ದವು. ಮೃತಳ ತಾಯಿ ನೀಡಿದ ದೂರನ್ನು ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆತ ತಪ್ರೊಪ್ಪಿಕೊಂಡಿದ್ದಾನೆ.ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗವುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *