ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ ಮಗುವಿಗೆ ಗಾಯ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ (5) ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ಈ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.

Ad Widget ... ..

ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ.ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿದಿನಗಳು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

Ad Widget

Leave a Comment

Your email address will not be published. Required fields are marked *