ಸಮಗ್ರ ನ್ಯೂಸ್: ರಾಜ್ಯದಲ್ಲಿ ಡಿಸೆಂಬರ್ 5ರವರೆಗೂ ಮಳೆ ಮುಂದುವರಿಯಲಿದೆ. ಡಿಸೆಂಬರ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನುಳಿದಂತೆ ಬೇರೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವುದು.
ಡಿಸೆಂಬರ್ 2ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿಯಿಂದ ಅತಿ ಭಾರಿ ಗುಡುಗು-ಮಳೆಯಾಗಲಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗಲಿದೆ. ಇನ್ನು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದಾಗಿ ಐಎಂಡಿ ತಿಳಿಸಿದೆ.
ಬೆಂಗಳೂರಲ್ಲಿ ಮೋಡ ಸಹಿತ ವಾತಾವರಣ ಇರಲಿದ್ದು, ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಲ್ಲಿ ಕನಿಷ್ಠ ತಾಪಮಾನ 18.62 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗರಿಷ್ಠ 21.61 ಡಿಗ್ರಿ ಸೆಲ್ಸಿಯಸ್ ಇರಲಿದೆ. ಆರ್ದ್ರತೆ ಮಟ್ಟ ಶೇ.82ರಷ್ಟು. ಗಾಳಿಯ ವೇಗ ಗಂಟೆಗೆ 82 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.