ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಸ್ತಿ ಖಾಸಗಿ ಟ್ರಸ್ಟ್ ಗೆ ಹಸ್ತಾಂತರ ಆರೋಪ| ಅನಿರ್ದಿಷ್ಟಾವಧಿ ಹೋರಾಟಕ್ಕೆ ದೇವಸ್ಥಾನ ಸಂರಕ್ಷಣಾ ಸಮಿತಿ ನಿರ್ಧಾರ
ಸಮಗ್ರ ನ್ಯೂಸ್: ರಾಜ್ಯ ಮುಜುರಾಯಿ ಇಲಾಖೆಯ ‘ಎ’ ಗ್ರೇಡ್ ದೇವಸ್ಥಾನ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು ರಕ್ಷಿಸಲು ಆಗ್ರಹಿಸಿ ನವೆಂಬರ್ 11 ರಂದು ದೇವಸ್ಥಾನದ ವಠಾರದಲ್ಲಿ ನ್ಯಾಯ ಸಿಗುವವರೆಗೆ ಧರಣಿ ನಡೆಸಲಾಗುತ್ತದೆ ಎಂದು ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ […]