November 2024

ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್‌

ಸಮಗ್ರ ನ್ಯೂಸ್: ಉಪಚುನಾವಣೆ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಗೆ ತೆರಳಿರುವ ಸಿಎಂ ಸಿದ್ದರಾಮಯ್ಯನವರು ನ.04 ರಂದು ಹುಲಗೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಇದೇ ವೇಳೆ, ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಪೆಂಡಾಲ್ ಕಿತ್ತುಹೋಯಿತು. ಸಿಎಂ ಉಪಸ್ಥಿತರಿದ್ದ ವೇದಿಕೆ ಮುಂಭಾಗದಲ್ಲಿ ಪೆಂಡಾಲ್‌ ಹಾರಿತು. ತಕ್ಷಣ ಸ್ಥಳದಲ್ಲಿದ್ದ ಸಿಬ್ಬಂದಿ ಪೆಂಡಾಲ್ ಅನ್ನು ಹಿಡಿದುಕೊಂಡು ನಿಂತು ಹೆಚ್ಚಿನ ಸಮಸ್ಯೆಯಾಗದಂತೆ ತಡೆದರು.

ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್‌ Read More »

ಡಿಸಿಎಂ ಡಿ.ಕೆ.ಶಿ ಗೆ ಬಿಗ್ ರಿಲೀಫ್: CBI ತನಿಖೆ ಹಿಂಪಡೆದ ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾ‌ರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು.ಈ ಮೂಲಕ ಡಿಸಿಎಂ ಡಿಕೆಶಿಗೆ ಮತ್ತೆ ರಿಲೀಫ್ ನೀಡಿದೆ.ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡರು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಕರ್ನಾಟಕ ಹೈಕೋರ್ಟ್ ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ

ಡಿಸಿಎಂ ಡಿ.ಕೆ.ಶಿ ಗೆ ಬಿಗ್ ರಿಲೀಫ್: CBI ತನಿಖೆ ಹಿಂಪಡೆದ ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್ Read More »

ಸುನ್ನತ್ ಕುರಿತು ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಫೋಟೋ ಎಡಿಟ್ ಮಾಡಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ‘ಮುಂದೊಂದು ದಿನ ಹಿಂದೂಗಳು ಸುನ್ನತ್ ಮಾಡಿಕೊಳ್ಳುವ ಸಂದರ್ಭ ಬರಬಹುದು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ವಿಚಾರ ಇದೀಗ ಮಂಗಳೂರಿನಲ್ಲಿ ಸದ್ದು ಮಾಡ್ತಿದೆ. ಬೆಳ್ತಂಗಡಿಯಲ್ಲಿ ನಡೆದ ‘ದೀಪಾವಳಿ ದೋಸೆ ಹಬ್ಬ’ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ನಮ್ಮ ಕಡೆಯ ಉಸಿರು ಇರುವವರೆಗೂ ಹಿಂದುತ್ವವೇ ಬದುಕು ಎಂಬ ರೀತಿಯ ರಾಜಕಾರಣ ಮಾಡದಿದ್ದರೆ, ಮುಂದೊಂದು ದಿನ ನಾವು ಸುನ್ನತ್ ಮಾಡಿಕೊಳ್ಳಬೇಕಾದ ಸಂದರ್ಭ ಬರಬಹುದು. ಆದ್ದರಿಂದ ನಾವು ಹಿಂದುತ್ವವನ್ನು ಮೈಗೂಡಿಸಿಕೊಂಡು ಕೆಲಸ ಮಾಡಬೇಕು ಎಂದು

ಸುನ್ನತ್ ಕುರಿತು ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಫೋಟೋ ಎಡಿಟ್ ಮಾಡಿದ ಕಿಡಿಗೇಡಿಗಳು Read More »

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿ ಎಡಬದಿಯಲ್ಲಿ ಕುಳಿತ್ತಿದ್ದ ಮಹಿಳೆಗೆ ತಲೆ ಭಾಗಕ್ಕೆ ಗಂಭೀರ ಏಟಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ Read More »

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಬ್ರದ ಒಳಮೊಗ್ರು ಕಾಡಿನಲ್ಲಿ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯ ತಲೆಬುರುಡೆ, ಎಲೆಬುಗಳು ಮಾತ್ರ ಇದ್ದು, ನೇಣಿನ ಕುಣಿಕೆಯಲ್ಲಿ ಶವ ನೇತಾಡುತ್ತಿತ್ತು.ಮೃತ ಮಹಿಳೆಯನ್ನು ನಳಿನಿ ಎಂದು ಗುರುತಿಸಲಾಗಿದೆ. ಊರ್ವ ನಿವಾಸಿಯಾಗಿದ್ದ ನಳಿನಿ ಸಂಜೀವ್ ಎಂಬುವವರನ್ನು ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದರು. ಆಗಾಗ ತಾಯಿ ಮನೆಗೆ ಹೋಗಿ ಬರುತ್ತಿದ್ದರು. ಇದ್ದಕ್ಕಿದ್ದಂತೆ ನಳಿನಿ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದರು. ಅ.8ರಂದು ಸಂಪ್ಯ

ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ Read More »

ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ:ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ಸಮಗ್ರ ನ್ಯೂಸ್: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ.ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ದೇವೇಗೌಡರು ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೊಂಗನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೂ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಒಟ್ಟು 13 ಕಡೆಗಳಲ್ಲಿ ಎಂದು ಹೆಚ್‌.ಡಿ.ಕೆ. ನಿಖಿಲ್ ಪರವಾಗಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.

ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ:ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ Read More »

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.!

ಸಮಗ್ರ ನ್ಯೂಸ್: ಉತ್ತರಾಖಂಡದ ಅರಾ ಜಿಲ್ಲೆಯ ರಾಮ್ನಗ‌ರ್ ಬಳಿ ಸೋಮವಾರ ಬೆಳಿಗ್ಗೆ ಬಸ್‌ ಕಮರಿಗೆ ಬಿದ್ದ ಪರಿಣಾಮ ಮಕ್ಕಳು ಸೇರಿ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕ‌ರ್ ಸಿಂಗ್ ಧಾಮಿ ಹೇಳಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.! Read More »

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಈ ಪಟ್ಟಿಯಲ್ಲಿ ಇರಾನ್‌ನ ಹೆಸರೂ ಕೂಡ ಇದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತಿಸಘಡದ ಮೂಲದ ಪ್ರವಾಸಿಗ ಜಲಪಾತದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಅಮೀತ್ ಕುಮಾರ್(30)ಮೃತ ದುರ್ದೈವಿ. ಈತ ಮೂಲತಃ ಛತ್ತಿಸಘಡದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದು, ಭಾನುವಾರ ಸ್ನೇಹಿತರ ಜತೆ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತಕ್ಕೆ ತೆರಳಿದ ವೇಳೆ ಜಲಪಾತದ ಸಮೀಪ ಈಜಲು ಹೋಗಿ ಸಾವನ್ನಪ್ಪಿದ್ದಾನೆ.‌ ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು Read More »

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಕೆಲವು ದಿನಗಳ ಹಿಂದಷ್ಟೇ ‘ಡಾನಾ’ ಚಂಡಮಾರುತ ಅಬ್ಬರಿಸಿ ಕೊನೆಗೊಂಡಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಚಂಡಮಾರುತ ಪರಿಚಲನೆ ಸಮುದ್ರ ಮಟ್ಟದಲ್ಲಿ ಸೃಷ್ಟಿಯಾಗಿದೆ. ಇದು ಏನೇನು ಅವಾಂತರ ಸೃಷ್ಟಿ ಮಾಡಲಿದೆಯೋ ಎಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ತಮಿಳುನಾಡು ಕರಾವಳಿ ಮತ್ತು ಪಕ್ಕದ ಶ್ರೀಲಂಕಾದ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಇದೆ.

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ Read More »