November 2024

ಸತ್ಯಜಿತ್‌ ಸುರತ್ಕಲ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಇವರ ತಾಯಿ ಭಾರತಿ ವಾಸುದೇವ ನಿಧನರಾಗಿದ್ದಾರೆ. ಇವರು ನ.12ರ ಬೆಳಿಗ್ಗೆ ಮೃತ ಹೊಂದಿದ್ದಾರೆ. ಮೃತರು ಪತ್ನಿ ವಾಸುದೇವ, ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ ಸಹೋದರಿಯನ್ನು ಅಗಲಿದ್ದಾರೆ.

ಸತ್ಯಜಿತ್‌ ಸುರತ್ಕಲ್ ಗೆ ಮಾತೃವಿಯೋಗ Read More »

ಮಲೆನಾಡಿನಲ್ಲಿ ಮತ್ತೆ ಕೆಂಪುಉಗ್ರರ ಕರಿನೆರಳು| ಕೊಪ್ಪದಲ್ಲಿ ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ|ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು

ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ. ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ

ಮಲೆನಾಡಿನಲ್ಲಿ ಮತ್ತೆ ಕೆಂಪುಉಗ್ರರ ಕರಿನೆರಳು| ಕೊಪ್ಪದಲ್ಲಿ ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬರು ವಶಕ್ಕೆ|ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು Read More »

ಪಕ್ಷಿಕೆರೆ ಕೊಲೆ ಪ್ರಕರಣ| ಕಾರ್ತಿಕ್ ಭಟ್ ತಾಯಿ, ಸಹೋದರಿ ಅರೆಸ್ಟ್| ಠಾಣೆಯಲ್ಲಿ ನಡೆಯಿತು ಮೆಗಾ ಹೈಡ್ರಾಮ!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂದಿಸಿದ್ದಾರೆ. ಶ್ಯಾಮಲಾ ಭಟ್(61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್(36) ಬಂಧಿತರು. ಇಬ್ಬರ ವಿರುದ್ಧ ಕಾರ್ತಿಕ್ ಭಟ್ ಪತ್ನಿಯ ತಾಯಿ ಸಾವಿತ್ರಿ ನೀಡಿದ ದೂರಿನಂತೆ 308 ಭಾರತೀಯ ನ್ಯಾಯ ಸಂಹಿತೆ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಳೆದ ದಿನದ ಹಿಂದೆ ಪೊಲೀಸ್

ಪಕ್ಷಿಕೆರೆ ಕೊಲೆ ಪ್ರಕರಣ| ಕಾರ್ತಿಕ್ ಭಟ್ ತಾಯಿ, ಸಹೋದರಿ ಅರೆಸ್ಟ್| ಠಾಣೆಯಲ್ಲಿ ನಡೆಯಿತು ಮೆಗಾ ಹೈಡ್ರಾಮ! Read More »

ಲೈಂಗಿಕ ದೌರ್ಜನ್ಯ ಹಗರಣ| ಮಾಜಿ ಸಂಸದ ಪ್ರಜ್ವಲ್ ಗೆ ಸುಪ್ರೀಂನಲ್ಲೂ ಸಿಕ್ಕಿಲ್ಲ ಜಾಮೀನು

ಸಮಗ್ರ ನ್ಯೂಸ್: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ನಿರಾಕರಿಸಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಜೈಲು ಸೇರಿರುವ ಪ್ರಜ್ವಲ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ನೀಡಲು ನಿರಾಕರಿಸಿದೆ. ಅಕ್ಟೋಬರ್‌ 21ರಂದು ಪ್ರಜ್ವಲ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ (Karnataka Highcourt) ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ (Supreme Court) ಮೇಲ್ಮನವಿ ಸಲ್ಲಿಸಿದ್ದರು.

ಲೈಂಗಿಕ ದೌರ್ಜನ್ಯ ಹಗರಣ| ಮಾಜಿ ಸಂಸದ ಪ್ರಜ್ವಲ್ ಗೆ ಸುಪ್ರೀಂನಲ್ಲೂ ಸಿಕ್ಕಿಲ್ಲ ಜಾಮೀನು Read More »

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ‌‌ ಹಾರಿ‌ ಬಾಣಂತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ನಗರದ ಲೇಡಿಗೋಷನ್‌ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕಾರ್ಕಳದ ರಂಜಿತಾ (28) ಹಾರಿ ಮೃತಪಟ್ಟ ಘಟನೆ ನ.11ರಂದು ಬೆಳಗ್ಗೆ ನಡೆದಿದೆ. ರಂಜಿತಾ ಅವರು ಹೆರಿಗೆಗೆಂದು ಕಾರ್ಕಳದ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಕ್ಲಿಷ್ಟ ಆರೋಗ್ಯ ಸಮಸ್ಯೆ ಉಂಟಾಗಿದ್ದಕ್ಕೆ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಅ.28 ರಂದು ದಾಖಲು ಮಾಡಲಾಗಿತ್ತು. ಅ.30 ಕ್ಕೆ ಸಿಸೇರಿಯನ್‌ ಮೂಲಕ ಹೆರಿಗೆಯಾಗಿತ್ತು. ಮಗು ಎನ್‌ಐಸಿಯುನಲ್ಲಿತ್ತು. ಆದರೆ ನ.3 ರಂದು ಮಗು

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ Read More »

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಕೆ, ಸೇವನೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ. ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಬಳಕೆ, ಸೇವನೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ!

ಸಮಗ್ರ ನ್ಯೂಸ್ :ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿದೆ.ಮಂಗಳೂರಿನ ಬೆಂಗರೆ ನಿವಾಸಿ ಮಹಮ್ಮದ್ ಮುಸ್ತಫಾ ಹಲ್ಲೆಗೊಳಗಾದ ಯುವಕನಾಗಿದ್ದು ಸಜಿಪನಡುವಿನ ಯುವತಿಯೊಂದಿಗೆ ಪ್ರೇಮದೊಂದಿಗಿದ್ದ ಎನ್ನಲಾಗಿದೆ. ರಾತ್ರಿ ವೇಳೆ ಯುವತಿಯನ್ನು ಭೇಟಿಯಾಗಲು ಹೋದ ಸಂದರ್ಭ ಮುಸ್ತಾಫಾನನ್ನು ಹಿಡಿದು ಅರೆ

ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ! Read More »

ದಯವಿಟ್ಟು ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲಾ ಸಾಯಿಸಲು ಅನುಮತಿ ನೀಡಿ: ತಾಯಿ ಕಣ್ಣೀರು

ಸಮಗ್ರ ನ್ಯೂಸ್: ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲಾ ಮಗನ್ನ ಸಾಯಿಸಲು ಅನುಮತಿ ನೀಡಿ ಎಂದು ತಾಯಿಯೊಬ್ಬಳು ಕಣ್ಣಿರು ಹಾಕಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ. ತುರುವೇಕೆರೆಯ ರೇಣುಕಮ್ಮ ಮಗ ಅಭಿಷೇಕ್ ಎಂಬಾತ ಗಾಂಜಾ ಮಾದಕ ಸೇವನೆಗೆ ದಾಸನಾಗಿದ್ದ.ಇದರಿಂದಾಗಿ ಸಾಕಷ್ಟು ಅವಾಂತರ ಆಗಿತ್ತು.ಗಾಂಜಾ ಮತ್ತಿನಲ್ಲಿ ಸಿಕ್ಕ ಸಿಕ್ಕವರ ಮೇಲೆ ಪುಂಡಾಟಿಕೆ ಜೊತೆಗೆ ಹೆಣ್ಣು ಮಕ್ಕಳ ಮೇಲೆ ಕೀಟಲೆ ಮಾಡುತ್ತಿದ್ದ. ಸಿಕ್ಕವರ ಮೇಲೆ ಗಲಾಟೆ ಹೊಡೆದಾಟ ಮಾಡಿಕೊಳ್ಳುತ್ತಿದ್ದ. ಇದರಿಂದಾಗಿ ರೇಣುಕಮ್ಮ ರೋಸಿಹೋಗಿದ್ದು, ಕಣ್ಣಿರು ಹಾಕಿದ್ದಾರೆ. ಸಣ್ಣ ಹೋಟೆಲ್

ದಯವಿಟ್ಟು ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲಾ ಸಾಯಿಸಲು ಅನುಮತಿ ನೀಡಿ: ತಾಯಿ ಕಣ್ಣೀರು Read More »

ಗರ್ಭಿಣಿಯರಾದ ಒಂದೇ ಗ್ರಾಮದ 35 ಮದುವೆಯಾಗದ ಕನ್ಯೆಯರು; ಊರಿಗೆ ಊರೇ ಶಾಕ್

ಸಮಗ್ರ ನ್ಯೂಸ್:ಉತ್ತರ ಪ್ರದೇಶದ ವಾರಾಣಸಿಯ ರಮ್ನಾ ಎಂಬ ಗ್ರಾಮದಲ್ಲಿ ಯುವತಿಯರು ಮುಜುಗರಕ್ಕೊಳಗಾಗಿದ್ದು, ಪೋಷಕರು ಒಂದು ಕ್ಷಣ ಆತಂಕಕಕ್ಕೊಳಗಾಗಿದ್ದರು.ಸುಮಾರು 35ಕ್ಕೂ ಅಧಿಕ ಮದುವೆಯಾಗದ ಯುವತಿಯರ ಮೊಬೈಲ್‌ಗೆ ಗರ್ಭಿಣಿ ಮಹಿಳೆ ಎಂಬ ನೋಂದಣಿಯಾದ ದಾಖಲಾತಿಯ ಸಂದೇಶ ಬಂದ ಘಟನೆ ನಡೆದಿದೆ. ಗ್ರಾಮಸ್ಥರ ದೂರಿನ ಮೇರೆಗೆ ಸಂದೇಶ ಕಳುಹಿಸಲು ಕಾರಣನಾದ ಇಲಾಖೆಯ ಅಧಿಕಾರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ವಾರಾಣಸಿಯ ಮುಖ್ಯ ವಿಕಾಸ ಅಧಿಕಾರಿ ಹಿಮಾಂಶು ನಾಗಪಾಲ್ ಘಟನೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ.ರಮ್ಯಾ ಗ್ರಾಮದ ಮದುವೆಯಾಗದ

ಗರ್ಭಿಣಿಯರಾದ ಒಂದೇ ಗ್ರಾಮದ 35 ಮದುವೆಯಾಗದ ಕನ್ಯೆಯರು; ಊರಿಗೆ ಊರೇ ಶಾಕ್ Read More »

ಕೇಂದ್ರದಿಂದ ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್‌ ಹೈವೇಗೆ ಡಿಪಿಆರ್ ಟೆಂಡರ್ ಆಹ್ವಾನ| ಸಾವಿರಾರು ಮರಗಳ ಆಪೋಷನಕ್ಕೆ ಸಿದ್ಧತೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಟೆಂಡರ್‌ ಆಹ್ವಾನಿಸಿದೆ. ಇದರಿಂದ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗಿದೆ. ಬೆಂಗಳೂರು ಟು ಮಂಗಳೂರು ಹೋಗಬೇಕು ಅಂದರೆ ಸುಮಾರು 350 ಕಿಮೀ, ಕನಿಷ್ಟ ಆರರಿಂದ ಏಳು ಗಂಟೆಗಳ ಕಾಲ ಬೇಕಾಗುತ್ತದೆ. ಆದರೆ ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು ಟು ಮಂಗಳೂರು ಎಕ್ಸ್ ಪ್ರೆಸ್ ವೇ ಕಾರಿಡಾರ್ ಮಾಡಲು ಸಿದ್ಧತೆ

ಕೇಂದ್ರದಿಂದ ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್‌ ಹೈವೇಗೆ ಡಿಪಿಆರ್ ಟೆಂಡರ್ ಆಹ್ವಾನ| ಸಾವಿರಾರು ಮರಗಳ ಆಪೋಷನಕ್ಕೆ ಸಿದ್ಧತೆ Read More »