ಸಮಗ್ರ ನ್ಯೂಸ್: ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಕರ್ನಾಟಕ ಸರ್ಕಾರ ಇದೀಗ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಆದರೆ ಇದೀಗ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ.
ರಾಜ್ಯ ಸರ್ಕಾರದಿಂದ ಈಗಾಗಲೇ ನಾಲ್ಕೈದು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಮಾಡಲಾಗಿತ್ತು. ಆದರೆ, ಇನ್ನೂ ಶೇ.45ಕ್ಕೂ ಅಧಿಕ ವಾಹನ ಸವಾರರು ತಮ್ಮ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಂಡಿಲ್ಲ. ಆದ್ದರಿಂದ ಪುನಃ ಗಡುವು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದಲ್ಲಿ ಇನ್ನೂ 1.45 ಕೋಟಿ ವಾಹನ ಸವಾರರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳವುದು ಬಾಕಿಯಿದೆ. ಹೀಗಾಗಿ, ಜನರಿಗೆ ಅನುಕೂಲ ಆಗುವಂತೆ ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಲಾಗಿದೆ.