ಭಾರೀ ಮಳೆ ಹಿನ್ನೆಲೆ| ನಾಳೆ (ಡಿ.3) ದ.ಕ ಜಿಲ್ಲೆಯ ಅಂಗನವಾಡಿ, ಶಾಲೆ, ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.

. Ad Widget . Ad Widget

ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

. Ad Widget . . Ad Widget . Ad Widget

ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅಲ್ಲದೆ ಮೀನುಗಾರರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *