ಸಮಗ್ರ ನ್ಯೂಸ್: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
27ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ . ಈ ಬಗ್ಗೆ ವಿನಯ ಅವರಲ್ಲಿ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್‌ನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
ಸಂದೀಪ್ ಆ ದಿನ ಮನೆಗೆ ಬಾರದೇ ಇದ್ದಾಗ ನೆರೆ ಕರೆಯವರಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸರೋಜಾ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಸಂದೀಪ್‌ನನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ ಎನ್ನಲಾಗಿರುವ ಪ್ರತೀಕ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕೊಲೆ ಶಂಕೆಯನ್ನು ವ್ಯಕ್ತಪಡಿಸಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.