ಸಮಗ್ರ ನ್ಯೂಸ್ :ದ.ಕ ಜಿಲ್ಲಾ ಕಾಂಗ್ರೆಸ್’ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು. ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ ನಡೆದ ಗ್ರಾ. ಪಂ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ ಗ್ರಾ ಪಂಚಾಯತ್ ಸದಸ್ಯರಿಗೆ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಕಾರ್ಯ ವೈಖರಿ ಬಗ್ಗೆ ಅಕ್ರೋಶ ವ್ಯಕ್ತವಾಗಿದೆ.ಈ ವೇಳೆ ಕಾಂಗ್ರಸ್ ಕಛೇರಿಯೊಳಗೆ ಮುಖಂಡರಿಬ್ಬರು ಹೊಡೆದಾಡಿಕೊಂಡಿದ್ದಾರೆ. ಗಲಾಟೆ ತೀವ್ರ ಸ್ವರೂಪ ಪಡೆಯುತ್ತಲೇ ಕಾಂಗ್ರೆಸ್ ಕಛೇರಿಗೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ.
ಘಟನೆಯ ಬಳಿಕ ಕಛೇರಿಯಿಂದ ಹೊರಗೆ ಬಂದ ಚಂದ್ರ ಪ್ರಕಾಶ್ ತುಂಬೆಯವರು ಗಲಾಟೆಯೂ ಆಗಿಲ್ಲ ಹೊಡೆದಾಟವು ನಡೆದಿಲ್ಲ. ನನಗೆ ಯಾರೂ ಹಲ್ಲೆ ಮಾಡಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.ಈ ವೇಳೆ ಜಿಲ್ಲಾಧ್ಯಕ್ಷರ ಬದಲಾವಣೆಯಾಗಬೇಕು ಎಂಬ ಕಾರ್ಯಕರ್ತರ ಮಧ್ಯೆ ಇದೇಯಲ್ಲವೇ ಎಂದು ಪತ್ರಕರ್ತರು ಪ್ರಶ್ನಿಸಿದ್ದು. ಪಕ್ಷದ ಹಿತ ದೃಷ್ಟಿಯಿಂದ ಅತ್ಯಂತ ಶೀಘ್ರ ಜಿಲ್ಲಾಧ್ಯಕ್ಷರು ಬದಲಾದರೇ ಒಳ್ಳೆಯದು ಎಂದು ಚಂದ್ರ ಪ್ರಕಾಶ್ ತುಂಬೆ ಪ್ರತಿಕ್ರಿಯಿಸಿದ್ದಾರೆ.