ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಿನ್ನೆ (ಸೋಮವಾರ ಡಿ.2) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಯೊಂದು ನಡೆದಿತ್ತು. ಇದೀಗ ಇದಕ್ಕೆ ಸಂಬಂಧಪಟ್ಟಂತೆ ರಾತ್ರಿ ಮೃತದೇಹ ದೊರಕಿದ್ದು, ಹೊರತೆಗೆಯಲಾಗಿದೆ.
ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬುವವರೇ ಮೃತ ವ್ಯಕ್ತಿ. ಇವರು ಸಂಜೆ ಸರಿ ಸುಮಾರು ಐದರಿಂದ ಆರು ಗಂಟೆ ಸುಮಾರಿಗೆ ನದಿಗೆ ಇಳಿದಿದ್ದಾರೆ. ನಂತರ ಮುಳುಗಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಶೌರ್ಯ ವಿಪತ್ತು ನಿರ್ವಹಣೆ ತಂಡದವರು ಭೇಟಿ ನೀಡಿದ್ದಾರೆ.
ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ 11 ರ ಹೊತ್ತಿಗೆ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.