Ad Widget .

ಶೋಭಿತಾ ಶಿವಣ್ಣ ಸಾವಿನ ನಿಜ ಕಾರಣ ಬಯಲು ಮಾಡಿದ ಮರಣೋತ್ತರ ವರದಿ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ಸಾವಿನ ನಿಖರ ಕಾರಣವೇನೆಂದು ಅವರ ಮರಣೋತ್ತರ ಪರೀಕ್ಷಾ ವರದಿ ಖಚಿತಪಡಿಸಿದೆ. ಇದು ಕೊಲೆಯಲ್ಲ ಆತ್ಮಹತ್ಯೆ ಎಂದು ಸ್ಪಷ್ಟವಾಗಿದೆ.

Ad Widget . Ad Widget .

ಬ್ರಹ್ಮಗಂಟು ಧಾರವಾಹಿ ಖ್ಯಾತಿಯ ಶೋಭಿತಾ ಶಿವಣ್ಣ ಮೊನ್ನೆ ತಡರಾತ್ರಿ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.ಆದರೆ ಚೆನ್ನಾಗಿಯೇ ಇದ್ದ ಅವರು ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಳ್ಳುವಂತಹದ್ದು ಏನಾಗಿದೆ ಎಂದು ಎಲ್ಲರೂ ಅಚ್ಚರಿಪಟ್ಟುಕೊಂಡಿದ್ದರು.ಅಲ್ಲದೆ, ಅವರ ಸಾವಿನಲ್ಲಿ ಯಾರದ್ದಾದರೂ ಕೈವಾಡವಿರಬಹುದೇ ಎಂದು ಶಂಕಿಸಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget . Ad Widget .

ಇದೀಗ ಶೋಭಿತಾ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ದೇಹದ ಮೇಲೆ ಯಾವುದೇ ಗಾಯಗಳಿಲ್ಲ. ಹೀಗಾಗಿ ಇದು ಆತ್ಮಹತ್ಯೆಯೇ ಎಂದು ವೈದ್ಯರು ಖಚಿತಪಡಿಸಿದ್ದಾರೆ.ಹಾಗಿದ್ದರೂ ಪೊಲೀಸರು ತನಿಖೆ ನಡೆಸುತ್ತಿದ್ದು, ಸಂಸಾರದಲ್ಲಿ ಏನಾದರೂ ಸಮಸ್ಯೆಯಾಗಿದ್ದಿರಬಹುದೇ ಎಂದು ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ನೆರೆಹೊರೆಯವರನ್ನೂ ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಇದೀಗ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ.

Leave a Comment

Your email address will not be published. Required fields are marked *