Ad Widget .

ಸಾರಿಗೆ ನಿಗಮಗಳ ಎಲ್ಲಾ ಬಸ್ ಗಳಿಗೂ ವಿಸ್ತರಣೆಯಾದ ಕ್ಯೂಆರ್ ಕೋಡ್| UPI ಪಾವತಿಗೆ KSRTC ರೆಡಿ

ಸಮಗ್ರ ನ್ಯೂಸ್: ಇನ್ನು ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ! ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್​ಆರ್​​ಟಿಸಿ ಬಸ್​ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಕೆಎಸ್​ಆರ್​​ಟಿಸಿ ಮೂಲಗಳು ತಿಳಿಸಿವೆ.

Ad Widget . Ad Widget .

ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ನವೆಂಬರ್ 6 ರಂದು ಕೆಎಸ್​ಆರ್​​ಟಿಸಿ ಬಸ್​​ಗಳಲ್ಲಿ ಆರಂಭಿಸಲಾಗಿತ್ತು. ಸದ್ಯ ನಿಗಮದ ಎಲ್ಲಾ 8,941 ಬಸ್‌ಗಳಿಗೆ ವಿಸ್ತರಿಸಲಾಗಿದೆ.

Ad Widget . Ad Widget .

ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಆರಂಭದಲ್ಲೇ ಗಣನೀಯ ಯಶಸ್ಸನ್ನು ಸಾಧಿಸಿದೆ. ಸಂಸ್ಥೆಯ ದೈನಂದಿನ ಆದಾಯದ 7 ಕೋಟಿ ರೂ. (ಶಕ್ತಿ ಯೋಜನೆ ಮತ್ತು ವಿದ್ಯಾರ್ಥಿ ಪಾಸ್ ಫಲಾನುಭವಿಗಳನ್ನು ಹೊರತುಪಡಿಸಿ) ಪೈಕಿ 30-40 ಲಕ್ಷ ರೂಪಾಯಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಮೂಲಕವೇ ಪಾವತಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಎನಿವೇರ್ ಎನಿಟೈಮ್ ಅಡ್ವಾನ್ಸ್ಡ್ ರಿಸರ್ವೇಶನ್ ಸಿಸ್ಟಮ್ (ಅವತಾರ್) ಮೂಲಕ 28,000 ಬುಕಿಂಗ್‌ಗಳಿಂದ ಕೆಎಸ್‌ಆರ್‌ಟಿಸಿ ಇನ್ನೂ 1.5 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದೆ.

2024-25 ಆರ್ಥಿಕ ವರ್ಷದ ಅಂತ್ಯದ ವೇಳೆಗೆ, ತನ್ನ ದೈನಂದಿನ ಆದಾಯದ ಶೇ 60-70 ರಷ್ಟನ್ನು ಡಿಜಿಟಲ್ ಮತ್ತು ಕ್ಯುಆರ್ ಪಾವತಿ ವಿಧಾನಗಳ ಮೂಲಕ ಪಡೆಯುವ ಗುರಿಯನ್ನು ಕೆಎಸ್​ಆರ್​ಟಿಸಿ ಹೊಂದಿದೆ.

Leave a Comment

Your email address will not be published. Required fields are marked *