Ad Widget .

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದೊಳಗೆ ವ್ಯಕ್ತಿ ಶವ; ಕೊಲೆ ಶಂಕೆ

ಸಮಗ್ರ ನ್ಯೂಸ್: ನಿರ್ಮಾಣ ಹಂತದ‌ ಕಟ್ಟಡದೊಳಗೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಪೇಟೆಯ ಮಧ್ಯೆ ಇರುವ ನಿರ್ಮಾಣ ಹಂತದಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಹೊರ ರಾಜ್ಯದ ಕಾರ್ಮಿಕರು ಪರಸ್ಪರ ಗಲಾಟೆ ಮಾಡಿ ಕೊಂದಿರುವ ಸಾಧ್ಯತೆಯಿದೆ.

Ad Widget . Ad Widget .

ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ ವ್ಯಕ್ತಿಯನ್ನು ತಲೆಗೆ ಕಲ್ಲು ಅಥವಾ ಇನ್ನಿತರ ಸಲಕರಣೆಗಳಿಂದ ಹೊಡೆದು ಕೊಲೆಗೈದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಅರ್ಧ ಕಂಬಳಿ ಹೊದಿಸಿ ಮಲಗಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

Ad Widget . Ad Widget .

ಮೃತದೇಹದ ಸ್ವಲ್ಪ ದೂರದಲ್ಲಿ ಮೊಬೈಲ್ ಫೋನೊಂದು ಕಂಡುಬಂದಿದ್ದು, ಅದರ ಸಿಮ್ ಅನ್ನು ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *