Ad Widget .

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಆರೋಪಿ ಅಬೂಬಕ್ಕರ್ ಸಿದ್ದಿಕ್ ಪತ್ನಿ ಮನೆಗೆ ಎನ್ಐಎ ದಾಳಿ

ಸಮಘರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.

Ad Widget . Ad Widget .

ಕೊಲೆಯ ಸಂದರ್ಭ ಅಬೂಬಕ್ಕರ್ ಸಿದ್ದಿಕ್ ಸ್ಥಳದಲ್ಲೇ ಇದ್ದು, ಆರೋಪಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು, ಸದ್ಯ ತಲೆ ಮರೆಸಿಕೊಂಡಿದ್ದಾನೆ. ಸರ್ಚ್ ವಾರೆಂಟ್ ಪಡೆದ ಎನ್ ಐ ಎ ಪೋಲೀಸರು, ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯೂರಿಗೆ ಆಗಮಿಸಿ ತನಿಖೆಗೆ ಮುಂದಾಗಿದ್ದಾರೆ. ಅಬೂಬಕ್ಕರ್ ಸಿದ್ದಿಕ್ ಪತ್ನಿಯ ಮನೆ ಸಂಪ್ಯ ಠಾಣಾ ವ್ಯಾಪ್ತಿಯ ಕೆಯ್ಯೂರಿನಲ್ಲಿ ಇದೆ‌ ಎಂದು ಹೇಳಲಾಗುತ್ತಿದೆ.

Ad Widget . Ad Widget .

2022ರ ಜು 26ರಂದು ಬಿಜೆಪಿಯ ದ.ಕ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರ್ ಹತ್ಯೆಯಾಗಿತ್ತು. ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಮಾರಕಾಯುಧಗಳಿಂದ ನೆಟ್ಟಾರಿನ ಅವರ ಚಿಕನ್ ಶಾಪ್ ಬಳಿಯೇ ದಾಳಿ ನಡೆಸಿ ಪರಾರಿಯಾಗಿದ್ದರು . ಈ ಪ್ರಕರಣದಡಿ ಹಲವು ಆರೋಪಿಗಳನ್ನು ಕರ್ನಾಟಕ ಪೊಲೀಸರು ಹಾಗೂ NIA ಬಂಧಿಸಿದ್ದರೂ ಪ್ರಮುಖ ಆರೋಪಿಗಳ ಬಂಧನವಾಗಿರಲಿಲ್ಲ.

ಪ್ರಮುಖ ಆರೋಪಿಗಳ ಬಂಧನಕ್ಕಾಗಿ NIA ನಗದು ಬಹುಮಾನ ಘೋಷಿಸಿ ಲುಕ್ ಔಟ್ ನೊಟೀಸ್ ಜಾರಿಗೊಳಿಸಿತ್ತು. ಆ ಬಳಿಕವು ಆರೋಪಿಗಳು ಸಿಕ್ಕಿರಲಿಲ್ಲ . ಅವರು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಗುಮಾನಿ ಸ್ಥಳೀಯ ಮಟ್ಟದಲ್ಲಿ ಇದೆ.

Leave a Comment

Your email address will not be published. Required fields are marked *