ಕಡಬ: ಜೆಸಿ ವಲಯ ತರಬೇತುದಾರ, ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಗೋಳಿತೊಟ್ಟು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ , ಜೆಸಿ ವಲಯ ತರಬೇತುದಾರ, ಖ್ಯಾತ ನಿರೂಪಕ ಕಡಬ ತಾಲೂಕಿನ ಆಲಂಕಾರು ಸಮೀಪದ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget ... ..

ಮೃತರು ಜೆಸಿಐ ಪೂರ್ವ ವಲಯ ಉಪಾಧ್ಯಕ್ಷರಾಗಿ ಸತತ 25 ಗಂಟೆ ತರಬೇತಿ ನೀಡಿ ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿಗೆ ಭಾಗಿಯಾಗಿದ್ದರು. ಡಿ.5 ರಂದು ಪ್ರದೀಪ್ ಬಾಕಿಲ ಮನೆಯ ಅಂಗಳದಲ್ಲಿ ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ.

Ad Widget

ಮೃತರು ಇತ್ತೀಚೆಗಷ್ಟೇ ಶ್ರೀರಾಮಕುಂಜೇಶ್ವರ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಶಿಕ್ಷಕಿ ಹೇಮಲತಾ ಬಾಕಿಲ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *