Ad Widget .

ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಬಿಸಿನೆಸ್ ಪಾರ್ಟ್ನರ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಚಂಪಾಷಷ್ಠಿ ರಥೋತ್ಸವದಲ್ಲಿ ಅಮೆರಿಕಾದ ಡೊನಾಲ್ಡ್ ಟ್ರಂಪ್ ಅವರ ಬಿಸಿನೆಸ್ ಪಾರ್ಟ್ನರ್ ಶಶಿಭೂಷಣ್ ಭಾಗವಹಿಸಿದ್ದಾರೆ. ಅವರು ಅಮೆರಿಕಾದಲ್ಲಿ 3000 ಕೋಟಿ ರೂಪಾಯಿ ವೆಚ್ಚದಲ್ಲಿ 500 ಎಕರೆ ಜಾಗದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ನಿರ್ಮಿಸುವ ಯೋಜನೆಯನ್ನು ಹೊಂದಿದ್ದಾರೆ ಎಂದು ತಿಳಿಸಿದರು.

Ad Widget . Ad Widget .

ಮಂಗಳೂರು, ಡಿ.7ರಂದು ಚಂಪಾಷಷ್ಠಿ ಹಿನ್ನೆಲೆಯಲ್ಲಿ ಶನಿವಾರ (ಡಿಸೆಂಬರ್ 07) ಕುಕ್ಕೆ ಸುಬ್ರಮಣ್ಯದಲ್ಲಿ ರಥೋತ್ಸವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಅಮೆರಿಕಾದ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಅವರ ಬಿಸಿನೆಸ್ ಪಾರ್ಟ್ನರ್ ಶಶಿಭೂಷಣ್ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು.

Ad Widget . Ad Widget .

ಶಶಿಭೂಷಣ್‌ ಅಮೆರಿಕಾದಲ್ಲಿ 500 ಎಕರೆ ಜಾಗದಲ್ಲಿ 3000 ಕೋಟಿ ವೆಚ್ಚದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ಮತ್ತು ದೇವಸ್ಥಾನ ಕಟ್ಟಿಸುತ್ತಿದ್ದಾರೆ. ಶಶಿಭೂಷಣ್ ಅವರು ಅಮೆರಿಕನ್ ಪೊಲಿಟಿಕಲ್ ಆಕ್ಷನ್ ಕಮಿಟಿಯ ‘ಎ’ ಪ್ಯಾಕ್ ಮುನ್ನೆಡಿಸಿದ್ದಾರೆ. ಟ್ರಂಪ್ ಗೆಲುವಿನಲ್ಲಿ ಎ ಪ್ಯಾಕ್ ಸಾಕಷ್ಟು ಶ್ರಮ ವಹಿಸಿದೆ.

ಸುಬ್ರಮಣ್ಯ ಸ್ವಾಮಿ ದರ್ಶನ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಶಿಭೂಷಣ್, ಕುಕ್ಕೆ ಸುಬ್ರಹ್ಮಣ್ಯ ಅತ್ಯಂತ ಇತಿಹಾಸ ಪ್ರಸಿದ್ದ ಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ಬಂದು ಪುಳಕಿತನಾಗಿದ್ದೇನೆ. ಸನಾತನ ಧರ್ಮ ಉಳಿಸಲು ಅಮೇರಿಕಾದಲ್ಲಿ 500 ಎಕರೆ ಜಾಗದಲ್ಲಿ ಸನಾತನ ಧಾರ್ಮಿಕ ಕೇಂದ್ರ ಕಟ್ಟಿಸುತ್ತಿದ್ದೇವೆ. ಪ್ರಧಾನಿ ಮೋದಿ ಅವರಿಂದ ಸನಾತನ ಧರ್ಮಕ್ಕೆ ಒಳ್ಳೆಯದಾಗಲಿದೆ ಎಂದರು.

ಚಂಪಾಷಷ್ಠಿ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗ್ಗೆ 6.57ಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಿತು. ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Comment

Your email address will not be published. Required fields are marked *