Ad Widget .

ಮಾಜಿ ಸಿಎಂ ಎಸ್.ಎಂ ಕೃಷ್ಣ ವಿಧಿವಶ| ರಾಜ್ಯ ಸರ್ಕಾರದಿಂದ 3 ದಿನ ಶೋಕಾಚರಣೆ| ಡಿ.11ರಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಸಮಗ್ರ ನ್ಯೂಸ್: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget . Ad Widget .

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.

Ad Widget . Ad Widget .

ಮುಂದುವರೆಸಿ, ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ: 10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧಿಕೃತ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *