ಸಮಗ್ರ ನ್ಯೂಸ್ : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮರಾಠಿ ಭಾಷಿಗರು ಸಮಾವೇಶ ಏರ್ಪಡಿಸಿದ್ದರು. ಈ ದೇಶದಲ್ಲಿ ಎಲ್ಲಿ ಬೇಕಾದರೂ ವಾಸ ಮಾಡಬಹುದು, ಎಲ್ಲಿ ಬೇಕಾದರೂ ಹೋಗಬಹುದು, ಸಮ್ಮೇಳನ ಆಯೋಜಿಸಬಹುದು.ಆದರೆ ಕರ್ನಾಟಕ ಸರ್ಕಾರ ದಬ್ಬಾಳಿಕೆಯ ಚಕ್ರವನ್ನು ಬೀಸಿ ಸಮ್ಮೇಳನವನ್ನು ಆಯೋಜಿಸಿದ್ದ ಮೇಯರ್, ಶಾಸಕರು ಸೇರಿದಂತೆ ಮರಾಠಿ ಏಕೀಕರಣ ಸಮಿತಿಯ 100ಕ್ಕೂ ಹೆಚ್ಚು ಮರಾಠಿ ಭಾಷಿಕ ಸಹೋದರ-ಸಹೋದರಿಯರನ್ನು ಬಂಧಿಸಿದೆ ಎಂದು ವಾಗ್ದಾಳಿ ನಡೆಸಿದರು.
ದೇಶಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರ ಪ್ರತಿಮೆಯನ್ನು ತೆಗೆದುಹಾಕಲು ಪ್ರಯತ್ನಿಸುತ್ತಿರುವವರನ್ನು ನಾನು ಖಂಡಿಸುತ್ತೇನೆ. ನಮ್ಮ ನಿಲುವು ಸ್ಪಷ್ಟವಾಗಿದೆ, ಇಂತಹ ದಬ್ಬಾಳಿಕೆ ನಡೆಸುತ್ತಿರುವ ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಶಿಂಧೆ ಕಿಡಿಕಾರಿದ್ದಾರೆ.