Ad Widget .

ಜಯ ಸಿಗದಿದ್ದರೂ ಫಲ ಸಿಕ್ಕಿದೆ: ನಿಖಿಲ್ ಕುಮಾರಸ್ವಾಮಿ

ಸಮಗ್ರ ನ್ಯೂಸ್ : ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.ದೆಹಲಿಯಲ್ಲಿ ಡಿ. 09 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸೋಲಿಗೆ ಕಾರಣ ಹುಡುಕುವುದಿಲ್ಲ.

Ad Widget . Ad Widget .

ರಾಜಕೀಯ ಜೀವನದಲ್ಲಿ ಅನಿರೀಕ್ಷಿತ ನಿರ್ಧಾರ ಮಾಡಿದೆ. ಎರಡು ಪಕ್ಷಗಳ ಕಾರ್ಯಕರ್ತರಿಗಾಗಿ ಸ್ಪರ್ಧೆ ಅನಿರ್ವಾಯವಾಗಿತ್ತು. ಚುನಾವಣೆಯ ಕೊನೆಯ ಹಂತದಲ್ಲಿ ಮೈತ್ರಿಗೆ ಕಪ್ಪುಚುಕ್ಕೆ ಬರದಂತೆ ಕುಮಾರಸ್ವಾಮಿ ನಿರ್ಧಾರ ಮಾಡಿದರು ಎಂದರು.ಉಪಚುನಾವಣೆಯಲ್ಲಿ ಇಂಥ ಫಲಿತಾಂಶವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಸೋಲಿಗೆ ಸಾಕಷ್ಟು ಕಾರಣಗಳಿವೆ. ಚುನಾವಣೆ ಹಿಂದಿನ 48 ಗಂಟೆಗಳಲ್ಲಿ ಮಹಿಳೆಯರ ಖಾತೆಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ ಜಮೆ ಮಾಡಿದ್ದಾರೆ,ಅದನ್ನು ಪ್ರಶ್ನೆ ಮಾಡಬೇಕಿದೆ.

Ad Widget . Ad Widget .

ಸರ್ಕಾರ ಆಡಳಿತವನ್ನು ಎಷ್ಟರಮಟ್ಟಿಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದಕ್ಕೆ ಇದೊಂದು ಉದಾಹರಣೆ ಅಷ್ಟೆ ಎಂದರು.ಮೈತ್ರಿಕೂಟದ ಎಲ್ಲಾ ನಾಯಕರ ಅಣತಿಯಂತೆ ಕೊನೆ ಕ್ಷಣದಲ್ಲಿ ನಾನು ಸ್ಪರ್ಧೆ ಮಾಡಬೇಕಾಯಿತು. ಕೇವಲ 15 ದಿನಗಳು ಮಾತ್ರ ಚುನಾವಣೆ ನಡೆಸಲು ನಮ್ಮ ಬಳಿ ಸಮಯವಿತ್ತು. ಅವರಿಗೆ ಸಾಕಷ್ಟು ಸಮಯ ಸಿಕ್ಕಿತ್ತು, ನಮ್ಮ ಕಡೆ ಅಭ್ಯರ್ಥಿ ಆಯ್ಕೆಯಲ್ಲಿ ವಿಳಂಬವಾಯಿತು. ನಮಗೆ ಜಯ ಸಿಕ್ಕದೆ ಹೋದರೂ ಫಲ ಸಿಕ್ಕಿದೆ. ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.ಒಂದು ಸಮುದಾಯಕ್ಕೆ ದೇವೇಗೌಡರು ಅನೇಕ ಕೊಡುಗೆಗಳನ್ನು ನೀಡಿದ್ದರು. ಅವರು ನಮ್ಮ ಕೈ ಹಿಡಿಯಲಿಲ್ಲ, ನಾಗಮಂಗಲದಲ್ಲಿ ಕೋಮು ಸಂಘರ್ಷ ಉಂಟಾಗಿತ್ತು.

ಸಂಘರ್ಷದಲ್ಲಿ ಹಾನಿ ಉಂಟಾದ ಅಂಗಡಿ ಜನರಿಗೆ ಕುಮಾರಸ್ವಾಮಿ ಅವರು ಪರಿಹಾರ ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೂ ಪರಿಹಾರ ನೀಡಿದ್ದಾರೆ.ಚನ್ನಪಟ್ಟಣದ ಇತಿಹಾಸದಲ್ಲಿಯೇ 1200 ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೂ ಸೋತಿದ್ದೇವೆ, ಇದೊಂದು ನಮಗೆ ಪಾಠ ಎಂದರು ಅವರು.ನಾನು ಪಕ್ಷದ ಶಿಸ್ತಿನ ಸಿಪಾಯಿ. ಜೆಡಿಎಸ್ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿಯೇ ಹೊರತು ನಿಖಿಲ್ ಕುಮಾರಸ್ವಾಮಿ ಅವರಿಂದ ಜೆಡಿಎಸ್ ಅಲ್ಲ. ನನ್ನ ಇತಿಮಿತಿಗಳ ಬಗ್ಗೆ ನನಗೆ ಅರಿವಿದೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ.

ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುತ್ತೇನೆ. ಅವರ ಜತೆಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಮ್ಮ ಪಕ್ಷದಲ್ಲಿ ಸಾಕಷ್ಟು ಹಿರಿಯರಿದ್ದಾರೆ, ಹಿರಿಯ ನಾಯಕರ ಮಾರ್ಗದರ್ಶನದಿಂದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದು ನಿಖಿಲ್ ತಿಳಿಸಿದರು.

Leave a Comment

Your email address will not be published. Required fields are marked *