Ad Widget .

ಕಿರಾಣಿ ಅಂಗಡಿಯಲ್ಲಿ ವ್ಯಾಪಾರ ಮಾಡಿದ ರಾಹುಲ್ !

ಸಮಗ್ರ ನ್ಯೂಸ್ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ತಮ್ಮ ಬಿಡುವಿನ ಸಮಯದಲ್ಲಿ ಜನರೊಂದಿಗೆ ಬೆರೆಯುತ್ತಿದ್ದು, ಅವರ ಸುಖ – ದುಃಖ, ಕಷ್ಟಗಳನ್ನು ಕೇಳಿ ಪರಿಹರಿಸುವ ಕಾರ್ಯ ಮುಂದುವರಿಸಿದ್ದಾರೆ.ಮಂಗಳವಾರ ದೆಹಲಿಯ ಭೋಗಲ್‌ನಲ್ಲಿರುವ ಕಿರಣ ಸ್ಟೋರ್ ಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಅವರ ವ್ಯಾಪಾರ ವಹಿವಾಟು, ಲಾಭ ನಷ್ಟದ ಬಗ್ಗೆ ಮಾತನಾಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಷ್ಟೇ ಅಲ್ಲದೆ ಅಂಗಡಿಗೆ ಬಂದ ಗ್ರಾಹಕರಿಗೆ ಸ್ವತಃ ಅವರೇ ವ್ಯಾಪಾರ ಮಾಡಿದ್ದಾರೆ.ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಕಿರಾಣಿ ಅಂಗಡಿಗಳಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಕೆಲಸ ಮಾಡುತ್ತಾರೆ. ಅಂತಹ ಜಾಲಗಳು ಮತ್ತು ಸಣ್ಣ ಉದ್ಯಮಗಳು ನಮ್ಮ ದೇಶದ ಆರ್ಥಿಕತೆಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುತ್ತಿವೆ. ಅದಕ್ಕಾಗಿಯೇ ನಾನು ಅವರನ್ನು ಬಲಪಡಿಸುವ ಬಗ್ಗೆ ನಿರಂತರವಾಗಿ ಮಾತನಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.ಅಲ್ಲದೇ ದೇಶದಲ್ಲಿ ಸುಮಾರು 1.3 ಕೋಟಿ ದಿನಸಿ ಅಂಗಡಿಗಳಿವೆ ಮತ್ತು ಸುಮಾರು 15 ರಿಂದ 20 ಕೋಟಿ ಕುಟುಂಬಗಳು ನೇರವಾಗಿ ಅಥವಾ ಪರೋಕ್ಷವಾಗಿ ಈ ಅಂಗಡಿಗಳ ಮೇಲೆ ಅವಲಂಬಿತವಾಗಿವೆ.

Ad Widget . Ad Widget . Ad Widget .

ಆದರೆ ದೇಶದ ದೊಡ್ಡ ದೊಡ್ಡ ಕಂಪೆನಿಗಳು ಸಣ್ಣ ವ್ಯಾಪಾರಿಗಳ ಮೇಲೆ ಏಕಸ್ವಾಮ್ಯವನ್ನು ಸಾಧಿಸುತ್ತಿದೆ ಎಂದು ಆರೋಪಿಸಿದರು.ದೊಡ್ಡ ದೊಡ್ಡ ಕಂಪೆನಿಗಳು ಭಾರತಕ್ಕೆ ಬಂದ ಹಿನ್ನಲೆ ಸಣ್ಣ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಪರಿಣಾಮ ಬೀರುತ್ತಿದೆ. ಇದರಿಂದ ವರ್ಷದಿಂದ ವರ್ಷಕ್ಕೆ ವ್ಯಾಪಾರದಲ್ಲಿ ನಷ್ಟ ಅನುಭವಿಸಲಾಗುತ್ತಿದೆ.ಬಂದ ಹಣ ತೆರಿಗೆ ರೂಪದಲ್ಲಿ ಹೋಗುತ್ತದೆ, ಉಳಿದ ಹಣದಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ ಎಂದು ರಾಹುಲ್ ಹೇಳಿದರು.ಸದ್ಯ ರಾಹುಲ್ ಗಾಂಧಿ ಭೋಗಲ್ ನ ಅಂಗಡಿಯೊಂದರಲ್ಲಿ ವ್ಯಾಪಾರ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನಾಯಕನ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Leave a Comment

Your email address will not be published. Required fields are marked *