ಸಮಗ್ರ ನ್ಯೂಸ್: ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ.
ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದೀಗ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಭೇಟಿಯಾಗಿ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಒತ್ತಾಯಿಸಿ, ಮನವಿ ಸಲ್ಲಿಸಿದ್ದಾರೆ.