ಸೋಡಿಯಂ ಮೆಟಲ್ ಬಳಸಿ ಸ್ಪೋಟ| ಬಿಗ್ ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್ ಅರೆಸ್ಟ್

ಸಮಗ್ರ ನ್ಯೂಸ್: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್​ಬಾಸ್​ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

Ad Widget ... ..

ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮ ಸಮೀಪದ ಕೃಷಿ ಹೊಂಡವೊಂದರಲ್ಲಿ ಪ್ರತಾಪ್ ಸೋಡಿಯಂ ಮೆಟಲ್ ಬಳಸಿಕೊಂಡು, ಅದು ನೀರಿಗೆ ಬೆರೆತಾಗ ಹೇಗೆ ಸ್ಫೋಟವಾಗುತ್ತೆ ನೋಡಿ ಎಂಬ ಎಕ್ಸಪೆರಿಮೆಂಟ್​ ಮಾಡಿರುವ ಸೈನ್ಸ್​​ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

Ad Widget

ಇದರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಘಟನೆ ಸಂಬಂಧ BNS ಸೆಕ್ಷನ್​ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಡಿ ಮಿಡಿಗೇಶಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಮಿಡಿಗೇಶಿ ಪೊಲೀಸರು ಡ್ರೋನ್​ ಪ್ರತಾಪ್ ರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರತಾಪ್ ಸೈನ್ಸ್​ ಹೆಸರಲ್ಲಿ ಇದೆಂಥಾ ಹುಚ್ಚಾಟ ಮಾಡುತ್ತಿದ್ದಾನೆ ಎಂತಲೂ ಕೆಲ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀರಿಗೆ ಸೋಡಿಯಂ ಮೆಟಲ್ ಹಾಕುತ್ತಿದ್ದಂತೆ ಅದು ತಕ್ಷಣ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದಲ್ಲದೇ, ಶಬ್ಧ ಕೂಡ ದೊಡ್ಡ ಪ್ರಮಾಣದಲ್ಲೇ ಕೇಳಿಸಿತ್ತು. ಇದರ ಲೈವ್ ವಿಡಿಯೋವನ್ನು ಪ್ರತಾಪ್​​​ ಹಂಚಿಕೊಂಡಿದ್ದ. ಪ್ರತಾಪ್​ ಇದೇನು​ ಕಿತಾಪತಿಗೆ ಅಂತಾ ಕೆಲ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *