ರೇಣುಕಾಸ್ವಾಮಿ ಕೊಲೆ ಪ್ರಕರಣ| ಪವಿತ್ರಾ ಸೇರಿ ದರ್ಶನ್ ಗ್ಯಾಂಗ್ ನ 7 ಮಂದಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ ಮತ್ತು ಗ್ಯಾಂಗ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

Ad Widget ... ..

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ.

Ad Widget

ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೂ ಈಗ ಜಾಮೀನು ಮಂಜೂರಿ ಮಾಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು. ದರ್ಶನ್ ಪರ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರು, ದರ್ಶನ್ ಅವರದ್ದು ರೇಣುಕಾ ಸ್ವಾಮಿ ಕೊಲೆಯಲ್ಲಿ ಪಾತ್ರವಿಲ್ಲ ಎಂದು ವಾದಿಸಿದ್ದರು. ಪೊಲೀಸರು ಕೆಲವು ಉತ್ಪ್ರೇಕ್ಷಿತ ಆರೋಪಗಳನ್ನು ದರ್ಶನ್ ವಿರುದ್ಧ ಮಾಡಿದ್ದಾರೆ ಎಂದು ವಾದಿಸಿದ್ದರು.

ದರ್ಶನ್ ಪರ ವಕೀಲರ ವಾದವನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರು ದರ್ಶನ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೋಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

Leave a Comment

Your email address will not be published. Required fields are marked *