Ad Widget .

ಬಸ್ಸುಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಲಾರಿ ಪಲ್ಟಿ – ನಾಲ್ವರು ಸ್ಥಳದಲ್ಲೇ ಸಾವು.!

ಸಮಗ್ರ ನ್ಯೂಸ್ : ಶಾಲಾ ಮುಗಿಸಿ ಮನೆಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಬೃಹತ್ ಲಾರಿಯೊಂದು ಪಲ್ಟಿಯಾಗಿರುವ ದಾರುಣ ಘಟನೆ ಕೇರಳ ಪಾಲಕ್ಕಾಡ್‌ನಲ್ಲಿ ನಡೆದಿದೆ.ಮೃತರನ್ನು 14 ವರ್ಷ ವಯಸ್ಸಿನ ಇರ್ಫಾನಾ, ಮಿತಾ, ರಿಯಾ ಮತ್ತು ಆಯೇಶಾ ಎಂದು ಗುರುತಿಸಲಾಗಿದೆ.ಕೋಝಿಕ್ಕೋಡ್-ಪಾಲಕ್ಕಾಡ್ ರಾಜ್ಯ ಹೆದ್ದಾರಿ ಪನಯಂಪದಂನ ಕಲ್ಲಡಿಕೋಡ್ ನಲ್ಲಿ ಸಂಜೆ 4 ಗಂಟೆಗೆ ಈ ಘಟನೆಯಾಗಿದೆ.

Ad Widget . Ad Widget .

ಶಾಲೆ ಮುಗಿಸಿ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಲು ಬಸ್ ಗಾಗಿ ಕಾಯುತ್ತಿದ್ದರು, ಈ ವೇಳೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದು ಬಳಿಕ ಸ್ಕಿಡ್ ಆಗಿ ಅಲ್ಲೇ ಪಕ್ಕದಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ಪಲ್ಟಿಯಾಗಿ ಬಿದ್ದಿದೆ.ಪರಿಣಾಮ ಲಾರಿಯಡಿಯೇ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿನಿಯರು ಕರಿಂಬಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿದ್ದರು ಎಂದು ವರದಿಯಾಗಿದ್ದು, ಸದ್ಯ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *