Ad Widget .

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ‘ಟೀಮ್ ಕಲ್ಲೇಗ ಟೈಗರ್ಸ್‌’ ಹುಲಿ ವೇಷ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳಿಬ್ಬರು ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

Ad Widget . Ad Widget .

2023ರ ನ.6ರಂದು ರಾತ್ರಿ ನಡೆದಿದ್ದ ಅಕ್ಷಯ್ ಕಲ್ಲೇಗ (24) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಷಯ್ ಅವರ ಸ್ನೇಹಿತ ಚಿಕ್ಕಮೂಡ್ನೂರಿನ ವಿಖ್ಯಾತ್ ಬಿ. ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿ ಚೇತನ್, ಪಡೀಲು ನಿವಾಸಿ ಮನೀಷ್, ಬನ್ನೂರು ನಿವಾಸಿ ಮಂಜುನಾಥ್ ಯಾನೆ ಹರಿ, ಬ್ಲಾಕ್ ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷರಾಗಿದ್ದ ಪಡೀಲು ನಿವಾಸಿ ಕೇಶವ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

Ad Widget . Ad Widget .

ನ್ಯಾಯಾಂಗ ಬಂಧನದಲ್ಲಿದ್ದ ಚೇತನ್ ಮತ್ತು ಮನೀಷ್, ಜಾಮೀನಿನ ಮೇಲೆ ಬಿಡುಗಡೆ ಕೋರಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ನೇಮಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಮಹೇಶ್ ಕಜೆ ಅವರು, ‘ಘಟನೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಈಗಾಗಲೇ ಸುಮಾರು 55 ಸಾಕ್ಷ್ಯ ಸಂಗ್ರಹಿಸಿದ್ದು, ಇದೊಂದು ಗಂಭೀರ ಪ್ರಕರಣವಾಗಿದೆ. ಪ್ರಮುಖ ಸಾಕ್ಷಿಗಳ ವಿಚಾರಣೆಗೆ ಮೊದಲೇ ಆರೋಪಿಗಳನ್ನು ಬಿಡುಗಡೆ ಮಾಡಬಾರದು’ ಎಂದು ವಾದ ಮಂಡಿಸಿದ್ದರು. ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಚೇತನ್, ಮನೀಷ್ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಕರಣದ ಉಳಿದ ಇಬ್ಬರು ಆರೋಪಿಗಳಾದ ಮಂಜುನಾಥ್ ಯಾನೆ ಹರಿ, ಕೇಶವ ಪಡೀಲ್ ಅವರು ಜಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಈ ಹಿಂದೆಯೇ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿತ್ತು. ಆ ಬಳಿಕ ಅವರು ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯೂ ವಜಾಗೊಂಡಿತ್ತು.

ಆರೋಪಿಗಳಿಂದ ಹೈಕೋರ್ಟ್‌ಗೆ ಅರ್ಜಿ: ಅಕ್ಷಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಅಕ್ಷಯ್ ಅವರ ತಂದೆ ಕಬಕ ಗ್ರಾಮದ ಶೇವಿರೆ ನಿವಾಸಿ, ಕಲ್ಲೇಗ ದೈವಸ್ಥಾನದ ಪರಿಚಾಕರಿಯ ಚಂದ್ರಶೇಖರ್ ಗೌಡ ಅವರು ಪ್ರಾಸಿಕ್ಯೂಷನ್ ಪರ ವಾದಿಸಲು ಮಹೇಶ್ ಕಜೆ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸುವಂತೆ ಗೃಹ ಸಚಿವರ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಳಿಸಿತ್ತು. ಸರ್ಕಾರದ ಈ ಆದೇಶ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *