ಸಮಗ್ರ ನ್ಯೂಸ್: ಗಂಭೀರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿನ್ನೆ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರನ್ನ ಸ್ಯಾನ್ ಅವರ ಸಹೋದರಿ ಖುರ್ಷಿದ್ ಔಲಿಯ ಸ್ಪಷ್ಟನೆ ನೀಡಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.
ವಿಶ್ವಪ್ರಸಿದ್ಧ ತಬಲಾ ವಾದಕ ಝಾಕಿರ್ ಹುಸೈನ್ ರವಿವಾರ ನಿಧನರಾಗಿದ್ದಾರೆ ಎಂಬ ವರದಿ ಬೆನ್ನಲ್ಲೇ ಝಾಕಿರ್ ಅವರ ಸಹೋದರಿ ಖುರ್ಶಿದ್ ಔಲಿಯಾ ಸ್ಪಷ್ಟನೆ ನೀಡಿದ್ದು, ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಝಾಕಿರ್ ಹುಸೈನ್ ನಿಧನ ಕುರಿತ ವರದಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಸಹೋದರನ ಸ್ಥಿತಿ ಗಂಭೀರವಾಗಿದೆ. ಜಗತ್ತಿನಾದ್ಯಂತ ಇರುವ ಅವರ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಖುರ್ಶಿದ್ ಹೇಳಿದ್ದಾರೆ.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾದ ತಾಳವಾದ್ಯಗಾರ 1988 ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗಳನ್ನು ಪಡೆದರು. ತಬಲಾವನ್ನು ಜಾಗತಿಕ ವೇದಿಕೆಗೆ ಕೊಂಡೊಯ್ದಿರುವ 73 ವರ್ಷದ ಯುಎಸ್ ಮೂಲದ ಸಂಗೀತಗಾರ ರಕ್ತದೊತ್ತಡದ ಸಮಸ್ಯೆಗಳನ್ನ ಹೊಂದಿದ್ದರು ಎಂದು ಹುಸೇನ್ ಅವರ ಮ್ಯಾನೇಜರ್ ನಿರ್ಮಲಾ ಬಚಾನಿ ಹೇಳಿದರು.ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿತ ಸಮಸ್ಯೆಗಾಗಿ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಚಾನಿ ಹೇಳಿದರು.