ಸಮಗ್ರ ನ್ಯೂಸ್: ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎನ್ನುವಲ್ಲಿ ಬಸ್ಸಿನಡಿಗೆ ಬೈಕ್ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಡಿ. 15ರ ಸಂಜೆ ಸಂಭವಿಸಿದೆ.
ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಮೃತ ಬೈಕ್ ಸವಾರ. ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು.
ಬಸ್, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್ ಸಮೀಪ ಮುಖಾಮುಖಿ ಢಿಕ್ಕಿ ಆಗಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ತತ್‌ಕ್ಷಣ ಅವರನ್ನು ಆಯಂಬುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಮರದ ಕೆಲಸ (ಬಡಗಿ) ಮಾಡುತ್ತಿದ್ದರು. ತಂದೆ, ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.