ಜಾಮೀನು‌ ಸಿಕ್ಕಿದ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್| ಶಸ್ತ್ರಚಿಕಿತ್ಸೆ ಇಲ್ಲದೇ ಹೊರಬಂದ ನಟ!!

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಆಪರೇಷನ್ ಮಾಡಿಸಿಕೊಳ್ಳದೇ ಕೇವಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ.

. Ad Widget . Ad Widget

ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆದುಕೊಂಡಿದ್ದ ದರ್ಶನ್ ಫಿಜಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ದರ್ಶನ್ ಗೆ ಸಲಹೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ನಟ ದರ್ಶನ್ ಡಿಸ್ಚಾರ್ಜ್ ಆಗಿ ಮನೆಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *