Ad Widget .

ಜಮ್ಮು- ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ| ರಾಜ್ಯದ ಮೂವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

Ad Widget .

ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ 25 ವರ್ಷ ಮಹೇಶ್ ಮರಿಗೊಂಡ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ (32 ವರ್ಷ), ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದಯಾನಂದ ತಿರಕಣ್ಣನವರ (45 ವರ್ಷ) ದುರಂತದಲ್ಲಿ ಸಾವನ್ನಪ್ಪಿದ್ದಾರೆ.

Ad Widget . Ad Widget .

11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ನಿಲಂ ಪ್ರಧಾನ ಕಚೇರಿಯಿಂದ ಎಲ್‌ಒಸಿ ಮೂಲಕ ಪೂಂಚ್​ ಜಿಲ್ಲೆಯ ಬನೋಯ್‌ ಘರೋವಾ ಪೋಸ್ಟ್‌ಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಘರೋವಾ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಯೋಧರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *