December 2024

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 400 ಯುನಿಟ್ ಉಚಿತ ವಿದ್ಯುತ್; ದೇವೇಂದ್ರ ಯಾದವ್ ಭರವಸೆ

ಸಮಗ್ರ ನ್ಯೂಸ್: ‘ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳಿಗೆ 400 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಸಲಾಗುವುದು’ ಎಂದು ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವೇಂದ್ರ ಯಾದವ್ ಭರವಸೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನೆರಡು ತಿಂಗಳು ಇರುವಂತೆಯೇ ದೇವೇಂದ್ರ ಇಂತಹದೊಂದು ಹೇಳಿಕೆ ನೀಡಿದ್ದಾರೆ.ಪ್ರಸ್ತುತ ದೆಹಲಿಯಲ್ಲಿ ಎಎಪಿ ನೇತೃತ್ವದ ಸರ್ಕಾರವು ತಿಂಗಳಿಗೆ 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಸುತ್ತಿದೆ.’ವಿದ್ಯುತ್ ಬಿಲ್‌ಗೆ ಸಂಬಂಧಿಸಿದಂತೆ ಗ್ರಾಹಕರ ಲೂಟಿ ತಡೆಯಲಾಗುವುದು’ ಎಂದು ಅವರು ಹೇಳಿದ್ದಾರೆ. ‘ದೆಹಲಿ ನ್ಯಾಯ ಯಾತ್ರೆ’ಯಲ್ಲಿ […]

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 400 ಯುನಿಟ್ ಉಚಿತ ವಿದ್ಯುತ್; ದೇವೇಂದ್ರ ಯಾದವ್ ಭರವಸೆ Read More »

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನಲೆ| ಮುಳ್ಳಯ್ಯನ ಗಿರಿಗೆ 4 ದಿನ ಪ್ರವಾಸ ನಿರ್ಬಂಧ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿಯಲ್ಲಿ ದತ್ತ ಪಾದುಕೆ ದರ್ಶನ ಹಾಗೂ ದತ್ತ ಜಯಂತಿ ಹಿನ್ನಲೆಯಲ್ಲಿ ಪ್ರವಾಸಿಗರಿಗೆ 4 ದಿನ ಮುಳ್ಳಯ್ಯನ ಗಿರಿ ಹಾಗೂ ಮಾಣಿಕ್ಯಧಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶಿಸಿದೆ. ದತ್ತಜಯಂತಿ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ನಡೆಯುವ ದತ್ತಜಯಂತಿ ಡಿ.11ರಿಂದ 14ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈ ನಾಲ್ಕು ದಿನಗಳಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಡಿ. 15ರ ಸಂಜೆ ಬಳಿಕ ಮುಳ್ಳಯ್ಯನ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನಲೆ| ಮುಳ್ಳಯ್ಯನ ಗಿರಿಗೆ 4 ದಿನ ಪ್ರವಾಸ ನಿರ್ಬಂಧ Read More »

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ; ಜನರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಹನ್ನೊಂದು ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಗೈದ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕು ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದ್ದು, ಖಾಸಗಿ ಶಾಲಾ ಮುಖ್ಯಸ್ಥ ಹಾಜಿಮಲಂಗ ಗಣಿಯಾರನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರಡು- ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ.ಇದಲ್ಲದೆ ವಿಷಯವನ್ನು ಮನೆಯಲ್ಲಿ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ.

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ; ಜನರಿಂದ ಪ್ರತಿಭಟನೆ Read More »

ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

ಸಮಗ್ರ ನ್ಯೂಸ್: ಮನೆ ಮುಂದೆ ಬೈಕ್ ನಿಲ್ಲಿಸಿ ಒಳಗಡೆ ತೆರಳುತ್ತಿದ್ದವನ ಮೇಲೆ ಹಾಡಹಗಲೇ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಚಾಕುವಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಗರಗ ಗ್ರಾಮದ ಗಿರೀಶ್ ಕರಡಿಗುಡ್ಡ (40) ಕೊಲೆಯಾದವ ಎಂಬುವವರೇ ಹತ್ಯೆಗೀಡಾದವರು.ಮಂಗಳವಾರ ಮಧ್ಯಾಹ್ನ ಗಿರೀಶ್ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿ ಒಳಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಗಿರೀಶ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಘಟನೆ ನಡೆದ ಕೆಲ ಗಂಟೆಗಳ

ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು! Read More »

ಟಿಪ್ಪರ್ ಅಡಿ ಸಿಲುಕಿ ಬೈಕ್ ಸವಾರನಿಗೆ ಹೊತ್ತಿಕೊಂಡ ಬೆಂಕಿ

ಸಮಗ್ರ ನ್ಯೂಸ್: ಭೀಕರ ಅಪಘಾತವೊಂದರಲ್ಲಿ ಬೈಕ್ ಸವಾರ ಟಿಪ್ಪರ್ ಅಡಿಗೆ ಸಿಲುಕಿ ಬೆಂಕಿ ಹೊತ್ತಿಕೊಂಡಿರುವಂತಹ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇದರ ಶಾಕಿಂಗ್ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ತೆಲಂಗಾಣದ ನರಸಾಪುರ ಜಂಕ್ಷನ್‌ನಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಬೈಕ್ ಸವಾರ ದಶರಥ್ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಮೊದಲು ಟಿಪ್ಪರ್‌ಗೆ ಡಿಕ್ಕಿಯಾಗಿ ಅದರಡಿ ಸಿಲುಕಿಕೊಂಡಿದ್ದಾರೆ. ಟಿಪ್ಪರ್ ಚಾಲಕ ಮಾತ್ರ ಇದಾವುದೂ ತಿಳಿಯದಂತೆ ಮುಂದೆ ಸಾಗಿದ್ದಾನೆ. ತಕ್ಷಣ ಏಕಾಏಕಿ ಟಿಪ್ಪರ್ ಹಾಗೂ ಬೈಕ್‌ಗೆ ಬೆಂಕಿ

ಟಿಪ್ಪರ್ ಅಡಿ ಸಿಲುಕಿ ಬೈಕ್ ಸವಾರನಿಗೆ ಹೊತ್ತಿಕೊಂಡ ಬೆಂಕಿ Read More »

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ| ಡಿ.5 ರಂದು ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ(ಡಿ.5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬುಧವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಫಡ್ನವೀಸ್ ಉಪಸ್ಥಿತರಿದ್ದರು. ಮಹಾರಾಷ್ಟ್ರ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಲು

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ| ಡಿ.5 ರಂದು ಪ್ರಮಾಣವಚನ ಸ್ವೀಕಾರ Read More »

ಮನೆ ಕಟ್ಟಲು ಹಣ ತೆಗೆದುಕೊಂಡು ಬರುತ್ತಿದ್ದ ನಿವೃತ್ತ ಶಿಕ್ಷಕನ ಹತ್ಯೆ| ತಲೆಗೆ ಹೊಡೆದು ಹಣ ದರೋಡೆಗೈದ ಕಿರಾತಕರು

ಸಮಗ್ರ ನ್ಯೂಸ್: ಕನಸಿನ ಮನೆ ಕಟ್ಟುವ ಉದ್ದೇಶಕ್ಕಾಗಿ ಬ್ಯಾಂಕ್‌ನಿಂದ ತಮ್ಮ ನಿವೃತ್ತಿಯ ಹಣವನ್ನು ವಿತ್‌ಡ್ರಾ ಮಾಡಿ ಮರಳುತ್ತಿದ್ದ ನಿವೃತ್ತ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಹಣವನ್ನು ದೋಚಿದ್ದಾರೆ. ಈ ಕೃತ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಡೆದಿದೆ. ನಿವೃತ್ತ ಶಿಕ್ಷಕ ಹನುಮಂತರಾಯಪ್ಪ ಕೊಲೆಗೀಡಾದವರು. ಅವರ ಬಳಿ ಇದ್ದ ಮೂರು ಲಕ್ಷ ರೂ. ಹಣದೊಂದಿಗೆ ಪಾತಕಿಗಳು ಪರಾರಿಯಾಗಿದ್ದಾರೆ. ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯಿಂದ ಬಂದಿದ್ದ ಹಣವನ್ನು ನೆಲಮಂಗಲದ ಘೋರಘಟ್ಟ ಗ್ರಾಮದ

ಮನೆ ಕಟ್ಟಲು ಹಣ ತೆಗೆದುಕೊಂಡು ಬರುತ್ತಿದ್ದ ನಿವೃತ್ತ ಶಿಕ್ಷಕನ ಹತ್ಯೆ| ತಲೆಗೆ ಹೊಡೆದು ಹಣ ದರೋಡೆಗೈದ ಕಿರಾತಕರು Read More »

ಅಮೃತಸರ: ಅಕಾಲಿದಳ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ‌ ಖಲಿಸ್ತಾನಿ ಬೆಂಬಲಿಗರಿಂದ ಫೈರಿಂಗ್

ಸಮಗ್ರ ನ್ಯೂಸ್: ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದಲ್ಲಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿನಡೆಸಲಾಗಿದ್ದು, ಜನರು ಆರೋಪಿಗಳನ್ನು ಹಿಡಿದಿದ್ದಾರೆ. ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶ ದ್ವಾರದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ ಖಲಿಸ್ತಾನಿ ಬೆಂಬಲಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾಗಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಅಮೃತಸರ: ಅಕಾಲಿದಳ ನಾಯಕ ಸುಖಬೀರ್ ಸಿಂಗ್ ಬಾದಲ್ ಮೇಲೆ‌ ಖಲಿಸ್ತಾನಿ ಬೆಂಬಲಿಗರಿಂದ ಫೈರಿಂಗ್ Read More »

ಹವಾಮಾನ ಸಮಾಚಾರ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಇಂದು (ಡಿ.4) ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು, ದಕ್ಷಿಣ ಕನ್ನಡ ಸೇರಿ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ವ್ಯಾಪಕ

ಹವಾಮಾನ ಸಮಾಚಾರ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ 10 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ಸಾರಿಗೆ ನಿಗಮಗಳ ಎಲ್ಲಾ ಬಸ್ ಗಳಿಗೂ ವಿಸ್ತರಣೆಯಾದ ಕ್ಯೂಆರ್ ಕೋಡ್| UPI ಪಾವತಿಗೆ KSRTC ರೆಡಿ

ಸಮಗ್ರ ನ್ಯೂಸ್: ಇನ್ನು ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ! ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್​ಆರ್​​ಟಿಸಿ ಬಸ್​ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ ಆಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಕೆಎಸ್​ಆರ್​​ಟಿಸಿ ಮೂಲಗಳು ತಿಳಿಸಿವೆ. ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆಯನ್ನು ನವೆಂಬರ್ 6 ರಂದು ಕೆಎಸ್​ಆರ್​​ಟಿಸಿ ಬಸ್​​ಗಳಲ್ಲಿ ಆರಂಭಿಸಲಾಗಿತ್ತು. ಸದ್ಯ ನಿಗಮದ ಎಲ್ಲಾ 8,941

ಸಾರಿಗೆ ನಿಗಮಗಳ ಎಲ್ಲಾ ಬಸ್ ಗಳಿಗೂ ವಿಸ್ತರಣೆಯಾದ ಕ್ಯೂಆರ್ ಕೋಡ್| UPI ಪಾವತಿಗೆ KSRTC ರೆಡಿ Read More »