ಸಮಗ್ರ ನ್ಯೂಸ್: ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ.
ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು, ಚಾರ್ಮಡಿ ಗ್ರಾಮದ ಅನ್ನಾರ್ ಬಳಿ ನದಿಯಲ್ಲಿ 11ಕ್ಕೂ ಹೆಚ್ಚು ಮೂಟೆಗಳಲ್ಲಿ ಗೋ ತ್ಯಾಜ್ಯಗಳು ಪತ್ತೆಯಾಗಿದ್ದು, ಭಜರಂಗದಳ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.